ಶುಕ್ರವಾರ, ಆಗಸ್ಟ್ 12, 2022
20 °C

‘ಹಸಿದ ಹೊಟ್ಟೆಯ ಶಿಕ್ಷಕರಿಂದ ಉತ್ತಮ ಶಿಕ್ಷಣ ಸಾಧ್ಯವೇ?’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಶಿಕ್ಷಣದ ಹೃದಯವಾ ಗಿರುವ ಶಿಕ್ಷಕರ ಆರೋಗ್ಯವನ್ನೇ ಸರ್ಕಾರಗಳು ಕಡೆಗಣಿಸುತ್ತಿವೆ. ಹಸಿದ ಹೊಟ್ಟೆಯ ಶಿಕ್ಷಕರಿಂದ ಉತ್ತಮ ಶಿಕ್ಷಣ ಒದಗಿಸಲು ಸಾಧ್ಯವೇ?’ ಎಂದು ಶಿಕ್ಷಣ ತಜ್ಞ ಪ್ರೊ.ಮಹಾಬಲೇಶ್ವರ ರಾವ್ ಪ್ರಶ್ನಿಸಿದರು.

‘ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳು ಮತ್ತು ಮುಂದಿನ ದಾರಿ’ ಕುರಿತು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

‘ಸಾಕಷ್ಟು ಅಬ್ಬರದಿಂದ ಬರುತ್ತಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲೂ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆಗಳಿಗೆ ಯಾವುದೇ ಪರಿಹಾರ ಸೂಚಿಸಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ನೀತಿಯನ್ನು ಸರ್ಕಾರ ಜಾರಿ ಮಾಡುತ್ತಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಕಿವುಡಾಗಿದೆ’ ಎಂದು ದೂರಿದರು.

ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ರಾಜೇಂದ್ರ ಬಾಬು, ‘ಇಂದಿನ ವಿಶ್ವವಿದ್ಯಾಲಯಗಳು ಪ್ರಮಾಣಪತ್ರ ನೀಡುವ ಕಾರ್ಖಾನೆಗಳಾಗಿವೆ. ಈ ಪರಿಸ್ಥಿತಿಯಲ್ಲಿ ಮನುಷ್ಯನನ್ನಾಗಿಸುವ ಶಿಕ್ಷಣ ನೀಡಬೇಕಿದೆ’ ಎಂದರು.

ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಘಟಕದ ಆಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ‘ಶಿಕ್ಷಕನ ಹೊಟ್ಟೆ ತುಂಬಿಸದೆ, ಮಕ್ಕಳ ನೆತ್ತಿಯನ್ನು ತುಂಬಿ ಎಂದು ಹೇಳುವ ಸರ್ಕಾರದ ಕ್ರಮ ಅಮಾನವೀಯ. ಸರ್ಕಾರ ಖಾಸಗೀಕರಣ ನೀತಿಗಳನ್ನು ಕೈಬಿಟ್ಟು, ರಾಷ್ಟ್ರೀಕರಣ ಮಾಡಲು ಮುಂದಾಗಬೇಕಿದೆ. ಈಗಿರುವ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು