ಶಿಮುಲ್ ಚುನಾವಣೆ ವೇಳೆ ಗಲಾಟೆ: ಲಾಠಿ ಪ್ರಹಾರ

ಮಂಗಳವಾರ, ಜೂನ್ 18, 2019
31 °C

ಶಿಮುಲ್ ಚುನಾವಣೆ ವೇಳೆ ಗಲಾಟೆ: ಲಾಠಿ ಪ್ರಹಾರ

Published:
Updated:
Prajavani

ಶಿವಮೊಗ್ಗ: ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ(ಶಿಮುಲ್) ಚುನಾವಣೆಯ ವೇಳೆ ವಿವಿಧ ಪಕ್ಷಗಳ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ತಾಲ್ಲೂಕಿನ ಮಾಚೇನಹಳ್ಳಿಯ ಶಿಮುಲ್ ಕಚೇರಿಯಲ್ಲಿ ಸೋಮವಾರ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಬಣಕಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹನುಮನಹಳ್ಳಿ ಬಸವರಾಜ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಸ್ಪರ ಮಾತು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಪೊಲೀಸರು ಗುಂಪು ಚದುರಿಸುವ ಯತ್ನ ಮಾಡಲು ಮುಂದಾಗಿದ್ದಾರೆ. ಆದರೂ ಪೊಲೀಸರ ಮಾತು ಕೇಳದೆ ಕೆಲವರು ಕೊರಳ ಪಟ್ಟಿ ಹಿಡಿದು ಹೊಡೆದಾಟ ನಡೆಸಲು ಶುರು ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಾಠಿ ಬೀಸಿದ್ದಾರೆ.

ಪೊಲೀಸರ ಲಾಠಿಯ ಏಟಿಗೆ ಗುಂಪಿನಲ್ಲಿದ್ದವರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು. ನಂತರ ಪೊಲೀಸರು ಶಿಮುಲ್ ಮುಂಭಾಗ ನಿಂತಿದ್ದ ಜನರನ್ನು ಚದುರಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !