ಯುವ ಸಮುದಾಯ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿ

7
ರಟ್ಟಿಹಳ್ಳಿ ಕಂಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಲಹೆ

ಯುವ ಸಮುದಾಯ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿ

Published:
Updated:
Deccan Herald

ಶಿಕಾರಿಪುರ: ಯುವ ಸಮುದಾಯ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು ಎಂದು ರಟ್ಟಿಹಳ್ಳಿ ಕಂಬಿಣಕಂತಿ ಮಠದ ಪೀಠಾಧ್ಯಕ್ಷ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಶುಕ್ರವಾರ ವೀರಭದ್ರೇಶ್ವರ ಸ್ವಾಮಿ 101ನೇ ಮಹಾರುದ್ರಾಭಿಷೇಕ ಕಾರ್ಯಕ್ರಮ ಪ್ರಯುಕ್ತ ನಡೆದ ಧರ್ಮಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಧರ್ಮ ಮಾರ್ಗದಲ್ಲಿ ಪ್ರತಿಯೊಬ್ಬರೂ ನಡೆಯಬೇಕು. ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ. ಧರ್ಮಸಭೆಯಲ್ಲಿ ನೀಡುವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಪೋಷಕರು ಮುಂದಾಗಬೇಕು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಶಿಕ್ಷಣ ಸಹಕಾರಿಯಾಗುತ್ತದೆ’ ಎಂದು ಸಲಹೆ ನೀಡಿದರು.

ಕಾಳೇನಹಳ್ಳಿ ಶಿವಯೋಗಾಶ್ರಮದ ಪೀಠಾಧ್ಯಕ್ಷ ರೇವಣಸಿದ್ಧ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಂಧತಿ ರಾಜೇಶ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜಪ್ಪ, ಗೌರವಾಧ್ಯಕ್ಷ ಶಿವಪ್ಪ, ಅಧ್ಯಕ್ಷ ಚನ್ನಪ್ಪಯ್ಯ, ಮುಖಂಡರಾದ ಭೋಜರಾಜ್‌ ಪಾಟೀಲ್‌, ರಾಜೇಶ್‌, ಶಿವನಗೌಡ್ರು, ಷಣ್ಮುಖಪ್ಪ, ವಿಶ್ವನಾಥ್‌, ವೀರಪ್ಪಯ್ಯ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !