ಶನಿವಾರ, ಮೇ 21, 2022
27 °C

100 ಐಸಿಯು ಹಾಸಿಗೆ ಸಿದ್ಧ: ಹಾಲಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ 100 ಐಸಿಯು ಹಾಸಿಗೆ ಸಿದ್ಧಗೊಳಿಸಲಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿದ ನಂತರ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸಿದ್ಧಪಡಿಸಿರುವ ಐಸಿಯು ವಾರ್ಡ್‌ಗಳನ್ನು ಪರಿಶೀಲಿಸಿ ಮಾತನಾಡಿದರು.

ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಕಾರ್ಯಾರಂಭ ಮಾಡಲಿದೆ. ತುರ್ತು ಸಂದರ್ಭದಲ್ಲಿ ಒದಗಿಸಲು ಜಂಬೋ ಆಮ್ಲಜನಕ ಸಿಲಿಂಡರ್ ವ್ಯವಸ್ಥೆ ಮಾಡಲಾಗಿದೆ. ಒಟ್ಟು 30 ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿದ್ದು, ರೋಗಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪಾಳಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಾಲ್ಲೂಕಿನ ಬಂದಗದ್ದೆ, ಜಂಬಗಾರುವಿನಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸಲು ಸಿದ್ಧತೆಗಳು ಪೂರ್ಣ
ಗೊಂಡಿವೆ. ಅಗತ್ಯ ಬಿದ್ದಾಗ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್. ಮೋಹನ್ ಮಾತನಾಡಿ, ‘ಜನವರಿ ತಿಂಗಳಿನಲ್ಲಿ ತಾಲ್ಲೂಕಿನಲ್ಲಿ 202 ಕೋವಿಡ್ ಪ್ರಕರಣಗಳು ದಾಖಲಾಗಿವೆ. 10 ಮಂದಿ ಗುಣಮುಖರಾಗಿದ್ದಾರೆ. ಕಳೆದ ವರ್ಷದ ರೀತಿಯಲ್ಲಿ ಕೋವಿಡ್ ಗಂಭೀರ ಸ್ವರೂಪ ತಾಳಿಲ್ಲ’ ಎಂದರು.

ಉಪವಿಭಾಗಾಧಿಕಾರಿ ಡಾ. ನಾಗರಾಜ್ ಎಲ್., ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್., ಸದಸ್ಯ ಟಿ.ಡಿ. ಮೇಘರಾಜ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಿನೋದ್ ರಾಜ್, ಜ್ಯೋತಿ ನಂಜುಂಡಸ್ವಾಮಿ, ಕೃಷ್ಣ ಶೇಟ್, ಸಂಜಯ್ ಕುಮಾರ್, ಸುರೇಶ್ ಕಂಬಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.