ಭಾನುವಾರ, ನವೆಂಬರ್ 29, 2020
24 °C

ನಗರೋತ್ಥಾನ: ಪಾಲಿಕೆಗೆ₹ 125 ಕೋಟಿ ಅನುದಾನ: ಎಸ್.ಎನ್. ಚನ್ನಬಸಪ್ಪ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯಲ್ಲಿ ನಗರದ ಅಭಿವೃದ್ಧಿಗೆ ₹ 125 ಕೋಟಿ ಬಿಡುಗಡೆಯಾಗಿದೆ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಜಿಲ್ಲೆಯ ಬ್ರಹ್ಮ, ವಿಷ್ಣು, ಮಹೇಶ್ವರರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರ ನೆರವಿನಿಂದ ನಗರದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ಹರಿದುಬರುತ್ತಿದೆ.  ನಗರೋತ್ಥಾನ ಯೋಜನೆಯ ಅನುದಾನವನ್ನು ಸ್ಮಾರ್ಟ್ ‌ಸಿಟಿ ಅನುಷ್ಠಾನಗೊಳ್ಳದ ವಾರ್ಡ್‌ಗಳ ಮೂಲ ಸೌಲಭ್ಯಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಚಿವ ಕೆ.ಎಸ್. ಈಶ್ವರಪ್ಪ ಅವರು ₹ 136 ಕೋಟಿ ಬಿಡುಗಡೆ ಮಾಡಿ
ದ್ದಾರೆ. ಈ ಹಣದಲ್ಲಿ ಶಾಲೆ, ಪಾರ್ಕ್‌ಗಳ ಅಭಿವೃದ್ಧಿ, ಅಂಗನವಾಡಿ, ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕಾಗಿ ವಿನಿಯೋಗ ಮಾಡಲಾಗುವುದು ಎಂದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಶಿವ ಮೊಗ್ಗ ನಗರಕ್ಕೆ ರೈಲ್ವೆ ಮೇಲುಸೇತುವೆ ಸೇರಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ ದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಚೇರಿಯೂ ಶಿವಮೊಗ್ಗದಲ್ಲಿ ಆರಂಭವಾಗಿದೆ. ಆಶ್ರಯ ಮನೆಗಳು, ಕೆರೆಗಳ ಅಭಿವೃದ್ಧಿ, ವಿಮಾನ ನಿಲ್ದಾಣ, ಪಾರ್ಕ್‌ಗಳ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ, ಸಾಗರ ರಸ್ತೆ ವಿಸ್ತರಣೆ ಕಾರ್ಯಗಳು ಜಿಲ್ಲೆಯ ಪ್ರಗತಿಯ ದ್ಯೋತಕ. ಇವೆಲ್ಲವೂ ಮೂವರ ಕೊಡುಗೆ  ಎಂದು ಸ್ಮರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಳ್ಳೆಕೆರೆ ಸಂತೋಷ್, ಬಿಜೆಪಿ ಮುಖಂಡರಾದ ಜಗದೀಶ್, ಮೋಹನ್ ರೆಡ್ಡಿ, ಶಶಿಧರ್, ನಾಗರಾಜ್‌
ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.