ಗುರುವಾರ , ಅಕ್ಟೋಬರ್ 29, 2020
26 °C
3703 ಜನರ ಗಂಟಲಿನ ದ್ರವ ಪರೀಕ್ಷೆ, 3020 ಜನರ ವರದಿ ನೆಗೆಟಿವ್ , ಇಬ್ಬರ ಸಾವು

ಶಿವಮೊಗ್ಗ: 147 ಮಂದಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಈಚೆಗೆ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚಿದ್ದಾರೆ. ಬುಧವಾರವೂ 206 ಮಂದಿ ಗುಣಮುಖರಾಗಿದ್ದಾರೆ. 147 ಮಂದಿಗೆ ಸೋಂಕು ದೃಢಪಟ್ಟಿದೆ. ಇಬ್ಬರು ಮೃತಪಟ್ಟಿದ್ದಾರೆ.

ಒಂದೇ ದಿನ 3703 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. 3020 ಜನರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 1,031 ಸೇರಿ ಒಟ್ಟು 1,394 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 325ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 19,450ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 65 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 27, ಶಿಕಾರಿಪುರದಲ್ಲಿ 39, ತೀರ್ಥಹಳ್ಳಿಯಲ್ಲಿ 4, ಸೊರಬದಲ್ಲಿ 4, ಸಾಗರದಲ್ಲಿ 2, ಹೊಸನಗರ 5 ಹಾಗೂ ಇಲ್ಲಿಗೆ ಚಿಕಿತ್ಸೆಗೆ ಬಂದಿದ್ದ 4 ಜನರಿಗೆ ಸೋಂಕು ಖಚಿತಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು