ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1648 ಜನರ ವರದಿ ನೆಗೆಟಿವ್:179 ಮಂದಿ ಗುಣಮುಖ

313 ಮಂದಿಗೆ ಕೊರೊನಾ ಸೋಂಕು ದೃಢ, 8 ಸಾವು
Last Updated 27 ಸೆಪ್ಟೆಂಬರ್ 2020, 3:03 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ1829 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದ್ದು, 1648 ಜನರ ವರದಿ ನೆಗೆಟಿವ್ ಬಂದಿದೆ.313 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 179 ಮಂದಿ ಗುಣಮುಖರಾಗಿದ್ದಾರೆ. 8 ಜನ ಮೃತಪಟ್ಟಿದ್ದಾರೆ.

ಮನೆಯಲ್ಲಿ 1195 ಸೇರಿ ಒಟ್ಟು 1930 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದುವರೆಗೆ ಕೋವಿಡ್‌ನಿಂದ ಜೀವ ಕಳೆದುಕೊಂಡವರ ಸಂಖ್ಯೆ 272ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 14,757ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 118 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ78, ಶಿಕಾರಿಪುರದಲ್ಲಿ 33, ತೀರ್ಥಹಳ್ಳಿಯಲ್ಲಿ 26, ಸೊರಬ 12, ಸಾಗರದಲ್ಲಿ30, ಹೊಸನಗರದಲ್ಲಿ 6 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದ 10 ಜನರಲ್ಲಿ ಸೋಂಕು ಖಚಿತಪಟ್ಟಿದೆ.

30 ಮಂದಿಗೆ ಕೊರೊನಾ

ಸಾಗರ ವರದಿ:
ತಾಲ್ಲೂಕಿನಲ್ಲಿ ಕೊರೊನಾದಿಂದಾಗಿ ಶನಿವಾರ ಇಬ್ಬರು ಮೃತಪಟ್ಟಿದ್ದು 30 ಮಂದಿಗೆ ಸೋಂಕು ದೃಢಪಟ್ಟಿದೆ.
ಎಸ್.ಎನ್.ನಗರ ಬಡಾವಣೆಯ 68 ವರ್ಷದ ಪುರುಷ,ಹುಣಸೂರು ಸಮೀಪದ ಹೂಗೊಪ್ಪಲು ಗ್ರಾಮದ 72 ವರ್ಷದ ಪುರುಷ
ಸಾವನ್ನಪ್ಪಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ 17, ನಗರವ್ಯಾಪ್ತಿಯಲ್ಲಿ 13 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 632 ಕ್ಕೆ ಏರಿದ್ದು 406 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ: ಎಎಸ್‌ಐ ಸಾವು

ಶಿವಮೊಗ್ಗ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗದ ಸಿಇಎನ್‌ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್(58) ಶನಿವಾರ ಮೃತಪಟ್ಟಿದ್ದಾರೆ.‌

ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಕೆಲ ದಿನದ ಹಿಂದೆ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಹಲವು ವರ್ಷದಿಂದ ಅಪರಾಧ ವಿಭಾಗದಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT