ಬುಧವಾರ, ಮೇ 18, 2022
24 °C

ಶಿವಮೊಗ್ಗದಲ್ಲಿ ರಾಜ್ಯದ ಮೊದಲ ‘ರೈತ ಮಹಾಪಂಚಾಯತ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮಾರ್ಚ್ ತಿಂಗಳಿನಲ್ಲಿ ರಾಜ್ಯದ ಮೊದಲ ‘ರೈತ ಮಹಾಪಂಚಾಯತ್‌’ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ. 

‘ನಗರದಲ್ಲಿ ನಡೆದ ಸಂಕಲ್ಪ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ದಿನಾಂಕ ಅಂತಿಮಗೊಂಡಿಲ್ಲ. ದೆಹಲಿಯಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್ ಮತ್ತು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ರಾಜ್ಯ ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಸೇರಿ ವಿವಿಧ ರೈತ ಮುಖಂಡರು, ದಲಿತ ಮುಖಂಡರು, ಎಡಪಕ್ಷಗಳ ಮುಖಂಡರು, ಕಾರ್ಮಿಕ ಮುಖಂಡರು, ಮಹಿಳಾ ಮುಖಂಡರು ಪಾಲ್ಗೊಳ್ಳಲಿದ್ದಾರೆ’ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್‌. ಬಸವರಾಜಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು