ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದಪುರ | ಕೈಕೊಟ್ಟ ಮತಯಂತ್ರ; 2 ಗಂಟೆ ಮತದಾನ ಸ್ಥಗಿತ

Published 7 ಮೇ 2024, 14:39 IST
Last Updated 7 ಮೇ 2024, 14:39 IST
ಅಕ್ಷರ ಗಾತ್ರ

ಆನಂದಪುರ: ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಹಾರಕ ಗ್ರಾಮದ ಬೂತ್ ನಂಬರ್ 114ರಲ್ಲಿ ಮತಯಂತ್ರದ ದೋಷದ ಕಾರಣ ಮತದಾನ ತಡವಾಗಿ ಆರಂಭವಾಯಿತು.

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾದಾಗ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿತು. 2 ಗಂಟೆಗಳ ಕಾಲ ಮತದಾನ ಸ್ಥಗಿತಗೊಂಡಿತ್ತು. 9 ಗಂಟೆಗೆ ಬೇರೆ ಮತಯತ್ರವನ್ನು ಜೋಡಿಸಿ ಮತದಾನಕ್ಕೆ ಅನುವು ಮಾಡಿಕೊಡಲಾಯಿತು. 100ಕ್ಕೂ ಹೆಚ್ಚು ಮತದಾರರು ಸಾಲಿನಲ್ಲಿ ನಿಂತಿದ್ದರು. ಯಾರೂ ವಾಪಸ್‌ ಮನೆಗೆ ಹೊಗದೆ ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT