ಸಾಗರ: ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ತಾಲ್ಲೂಕಿನ ಶಿರವಾಳ ಗ್ರಾಮದ ರತನ್ ಎಂಬಾತನಿಗೆ ಮಂಗಳವಾರ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮಹಿಳೆಯೊಬ್ಬರಿಗೆ ವಿವಾಹವಾಗುವಂತೆ ಪೀಡಿಸುತ್ತಿದ್ದ ರತನ್, ಮಹಿಳೆಯ ವಿವಾಹ ಬೇರೊಬ್ಬರೊಂದಿಗೆ ಜರುಗಿದ ನಂತರವೂ ಅವರಿಗೆ ಕಿರುಕುಳ ನೀಡುತ್ತಿದ್ದ ಸಂಬಂಧ ನಗರ ಠಾಣೆ ಪೊಲೀಸರು ರತನ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಗಾಡಿ ಅವರು, ಆರೋಪಿಯ ವಿರುದ್ಧ ಹೊರಿಸಲಾದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಂಜಿತ್ ನಾಯ್ಕ್ ಆರ್. ವಾದಿಸಿದ್ದರು.