ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಉರುಳಿ 20 ಮಕ್ಕಳಿಗೆ ಗಾಯ

Last Updated 15 ಡಿಸೆಂಬರ್ 2022, 6:54 IST
ಅಕ್ಷರ ಗಾತ್ರ

ಶಿವಮೊಗ್ಗ: ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 369ಇ ಬಳಿ ಗುರುವಾರ ಶಾಲಾ ಪ್ರವಾಸದ ಬಸ್ ಉರುಳಿ 20 ಮಕ್ಕಳು ಗಾಯಗೊಂಡಿದ್ದಾರೆ. ಈ ವೇಳೆ ಕೆಲವರಿಗೆ ಗಂಭೀರ ಗಾಯ ಆಗಿದೆ.

ಬಸ್ ನಲ್ಲಿ 83 ವಿದ್ಯಾರ್ಥಿಗಳು ಇದ್ದರು. ಅದರಲ್ಲಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಸಾಗರ ಉಪವಿಭಾಗೀಯ ಅಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಧರ್ಮಪುರಿ ಪ್ರೌಢ ಶಾಲೆ ವಿದ್ಯಾರ್ಥಿಗಳು. ಮೈಸೂರಿನಿಂದಶಿವಮೊಗ್ಗ, ಹೊಸನಗರ ಮಾರ್ಗವಾಗಿ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT