ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ.

ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಜೀವ ಜಿಲೆಟಿನ್ ಇರುವ ಶಂಕೆ ಹಿನ್ನೆಲೆ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆ ಬಳಿಕ ಮೃತರ ಸಂಖ್ಯೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.

ಈ ಮಧ್ಯೆ, ಸ್ಫೋಟದಿಂದ ಸಿಡಿದು ಹೊರಬಿದ್ದಿದ್ದ ಎರಡು ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹುಣಸೋಡು, ಕಲ್ಲುಗಂಗೂರು, ಅಬ್ಬಲೆಗೆರೆ ಮತ್ತು ಗೆಜ್ಜೇನಹಳ್ಳಿಗಳ ಸುತ್ತಮುತ್ತ 100ಕ್ಕೂ ಹೆಚ್ಚು ಕ್ರಶರ್ಗಳಿದ್ದು ಎಲ್ಲ ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳ ಸೇರಿ ಗಣಿಗಾರಿಕೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭೇಟಿ ನೀಡಿದ್ದು, ಸ್ಥಳದಲ್ಲೇ ಮೊಕ್ಕಾ ಹೂಡಿದ್ದಾರೆ.

ಇವನ್ನೂ ಓದಿ...
ಹುಣಸೋಡು ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಯಡಿಯೂರಪ್ಪ
ಶಿವಮೊಗ್ಗ ಡೈನಾಮೈಟ್ ಸ್ಫೋಟದಲ್ಲಿ ಕಾರ್ಮಿಕರು ಸಾವು: ಪ್ರಧಾನಿ ಮೋದಿ ಸಂತಾಪ
ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ: ಸಿದ್ಧರಾಮಯ್ಯ
ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ: ಮುರುಗೇಶ್ ನಿರಾಣಿ
ಶಿವಮೊಗ್ಗ | ಜಲ್ಲಿ ಕ್ರಷರ್ನಲ್ಲಿದ್ದ ಡೈನಾಮೈಟ್ ಸ್ಫೋಟ: 15 ಕಾರ್ಮಿಕರ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.