ಬುಧವಾರ, ಜನವರಿ 20, 2021
16 °C

30ರಿಂದ ‘ಸಕಾಲ’ ಸಪ್ತಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾರ್ವಜನಿಕರಲ್ಲಿ ಸಕಾಲ ಯೋಜನೆ ಬಗ್ಗೆ ಅರಿವು ಮೂಡಿಸುವ ನಿಟ್ಟನಲ್ಲಿ ಹಾಗೂ ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇ ಮಾಡಲು ನ.30ರಿಂದ ಎರಡು ಹಂತಗಳಲ್ಲಿ ‘ಸಕಾಲ’ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.

ನ.30ರಿಂದ ಡಿ.5ರವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ಹಾಗೂ ಡಿ.7ರಿಂದ 11ರವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಪ್ತಾಹವನ್ನು ಆಚರಿಸಲಾಗುವುದು.

ಹೊಸದಾಗಿ ಸ್ವೀಕರಿಸಿರುವ ಅರ್ಜಿಗಳನ್ನು ‘ಸಕಾಲ’ದಡಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇ ಮಾಡುವುದು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ‘ಸಕಾಲ’ ತಂಡದಿಂದ ಕಚೇರಿಗಳಿಗೆ ಭೇಟಿ ಹಾಗೂ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರ ಅಭಿಪ್ರಾಯ ಕ್ರೋಡೀಕರಿಸಲು ಹೆಲ್ಪ್ ಡೆಸ್ಕ್ ಸಹಾಯದೊಂದಿಗೆ ಪ್ರಶ್ನಾವಳಿಯನ್ನು ಭರ್ತಿ ಮಾಡಿಸುವುದು ಸೇರಿ ‘ಸಕಾಲ’ದ ಪ್ರಚಾರ ಕಾರ್ಯಕ್ರಮಗಳನ್ನು ಸಪ್ತಾಹದಲ್ಲಿ  ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

‘ಸಕಾಲ’ ಯೋಜನೆಯಡಿ ಒಟ್ಟು 98 ಇಲಾಖೆ, ಸಂಸ್ಥೆಗಳ 1020ಕ್ಕೂ ಹೆಚ್ಚಿನ ನಾಗರಿಕ ಕೇಂದ್ರಿತ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಈವರೆಗೆ 22,88,81,652 ಅರ್ಜಿಗಳನ್ನು ಸ್ವೀಕರಿಸಿ 22,82,55,866 ಅರ್ಜಿಗಳನ್ನು ವಿಲೇ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು