ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಕಾಂಬಾ ಜಾತ್ರೆ: ಮೂರನೇ ದಿನವೂ ಹರಿದುಬಂದ ಜನಸಾಗರ

Last Updated 25 ಮಾರ್ಚ್ 2022, 3:16 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಮೂರನೇ ದಿನವಾದ ಗುರುವಾರವೂ ಹೆಚ್ಚಿನ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದರು.

ಗುರುವಾರ ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಭಕ್ತರು ಸಾರತಿ ಸಾಲಿನಲ್ಲಿ ಬಂದು ದೇವಿಯ ದರ್ಶನ ಪಡೆದರು.

ಬೆಳಿಗ್ಗೆ 6.30ಕ್ಕೆ ವಾಲ್ಮೀಕಿ ಜನಾಂಗದವರು ಪೂಜೆ ಸಲ್ಲಿಸಿದರು. ಉಪ್ಪಾರರು, ಮಡಿವಾಳರು, ಮುಂದಿನ ಎರಡು ದಿನಗಳ ಕಾಲಗದ್ದುಗೆಯಲ್ಲಿರುವ ಅಮ್ಮನವರಿಗೆ ಸರತಿಯಂತೆ ಪೂಜೆ ಸಲ್ಲಿಸುವರು. ಮಾರ್ಚ್‌ 26ರಂದು ರಾತ್ರಿ 8ಕ್ಕೆ ಅಮ್ಮನವರ ರಾಜಬೀದಿ ಉತ್ಸವ ಗಾಂಧಿ ಬಜಾರ್, ಬಿ.ಎಚ್. ರಸ್ತೆ, ಟ್ಯಾಂಕ್ ಬಂಡ್ ರಸ್ತೆಯಿಂದ ಹೊನ್ನಾಳಿ ರಸ್ತೆ ಸೇತುವೆ ಮೂಲಕ ಸಾಗಿ ಅರಣ್ಯದಲ್ಲಿ ಮೂರ್ತಿ ವಿಸರ್ಜಿಸುವ ಮೂಲಕ ಜಾತ್ರೆ ಸಂಪನ್ನಗೊಳ್ಳುತ್ತದೆ.

ಶುಕ್ರವಾರ ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾರ್ಚ್‌ 25ರಂದು ರಾತ್ರಿ 8ಕ್ಕೆ ಮಹಾ ಮಂಗಳಾರತಿ ಇರುತ್ತದೆ. ಪ್ರತಿದಿನ ಬೆಳಿಗ್ಗೆ 7 ರಿಂದ ಹರಕೆ ಪೂಜೆ, ಪ್ರಸಾದ, ವಿನಿಯೋಗವಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT