ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್ ಚುನಾವಣೆ: ಮತ ಚಲಾಯಿಸಲಿರುವ 4180 ಮಂದಿ, 365 ಮತಗಟ್ಟೆ ಅಧಿಕಾರಿಗಳು

Last Updated 30 ನವೆಂಬರ್ 2021, 4:33 IST
ಅಕ್ಷರ ಗಾತ್ರ

ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳಿಂದ ಡಿ.10ರಂದು ನಡೆಯುವ ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಗೆ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ 4,180 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ.

ಚುನಾವಣೆ ನಿಮಿತ್ತ ಡಿ.16ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆ ಜನಪ್ರತಿನಿ ಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿ ಪ್ರತಿಯೊಬ್ಬರಿಗೂ ಅನ್ವಯವಾ ಗುತ್ತದೆ. ನೀತಿ ಸಂಹಿತೆ ಉಲ್ಲಂಘಿಸದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿ ಸಬೇಕು. ಚುನಾವಣೆಯನ್ನು ವ್ಯವಸ್ಥಿತ ವಾಗಿ ನಡೆಸಲು ಅಧಿಕಾರಿಗಳ ತಂಡ ರಚಿಸಲಾಗಿದೆ.

ಮಾದರಿ ನೀತಿ ಸಂಹಿತೆ ಅನುಷ್ಠಾನ ಕ್ಕಾಗಿ 33 ನೋಡಲ್ ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಗಳ ಮೇಲುಸ್ತುವಾರಿಗಾಗಿ 28 ನೋಡಲ್ ಅಧಿಕಾರಿಗಳು, 34 ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ರಚಿಸಲಾಗಿದೆ. ಸುಗಮ ಮತದಾನಕ್ಕಾಗಿ 365 ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ ತಂಡ ರಚಿಸಲಾಗಿದೆ. 65 ತಂಡಗಳನ್ನು ಕಾಯ್ದಿರಿಸಲಾಗಿದ್ದು, ಒಟ್ಟು 430 ಮತಗಟ್ಟೆ ಅಧಿಕಾರಿ ತಂಡಗಳಿವೆ.

ಕಾಂಗ್ರೆಸ್‌ನಿಂದ ಆರ್. ಪ್ರಸನ್ನ ಕುಮಾರ್, ಬಿಜೆಪಿಯಿಂದ ಡಿ.ಎಸ್. ಅರುಣ್, ಜೆಡಿಯುನಿಂದ ಬಿ.ಕೆ. ಶಶಿಕುಮಾರ್ ಹಾಗೂ ಪಿ.ವೈ.ರವಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT