ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

49 ಮಂದಿಗೆ ಕೊರೊನಾ 99 ಜನರು ಗುಣಮುಖ

Last Updated 28 ಅಕ್ಟೋಬರ್ 2020, 16:45 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 2,894 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಿದ್ದು, 2,095 ಜನರ ವರದಿ ನೆಗೆಟಿವ್ ಬಂದಿದೆ. 99 ಜನರು ಗುಣಮುಖರಾಗಿದ್ದಾರೆ. 49 ಮಂದಿಗೆ ಸೋಂಕು ದೃಢಪಟ್ಟಿದೆ.

ಮನೆಯಲ್ಲಿ 326 ಸೇರಿ ಒಟ್ಟು 461 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 343ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 20,650ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 14 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 5, ಶಿಕಾರಿಪುರದಲ್ಲಿ 12, ತೀರ್ಥಹಳ್ಳಿಯಲ್ಲಿ 8, ಸೊರಬದಲ್ಲಿ 4, ಸಾಗರ 2, ಹೊಸನಗರದಲ್ಲಿ 2 ಹಾಗೂ ಹೊರಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ದ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT