ಗುರುವಾರ , ಡಿಸೆಂಬರ್ 3, 2020
24 °C

₹ 5 ಲಕ್ಷ ಮೌಲ್ಯದ ಶ್ರೀಗಂಧ ಅಕ್ರಮ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಇಲ್ಲಿನ ಎಸ್.ಎನ್. ನಗರ ಬಡಾವಣೆಯಲ್ಲಿ ಮಂಜುನಾಥ ಎಂಬುವವರು ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 5 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ಬುಧವಾರ ವಶಪಡಿಸಿಕೊಂಡಿದ್ದಾರೆ.

ಸಿಬ್ಬಂದಿ ದಾಳಿ ನಡೆಸಿದಾಗ ಮಂಜುನಾಥ ಅವರ ಮನೆಯ ಮಹಡಿ ಮೆಟ್ಟಿಲಿನ ಕೆಳಗೆ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸ್ ಅರಣ್ಯ ಸಂಚಾರ ದಳದ  ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಬಿ., ಸಿಬ್ಬಂದಿ ರಂಗನಾಥ, ರತ್ನಾಕರ, ಗಿರೀಶ್, ವಿಶ್ವನಾಥ, ಮಂಜುನಾಥ ಕಾರ್ಯಾಚರಣೆ ಕೈಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.