ಮರವಂತೆ (ಬೈಂದೂರು): 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ದೇಶದ ಅಭಿವೃದ್ಧಿಗಾಗಿ ಏನನ್ನೂ ಮಾಡಿಲ್ಲ ಎಂದು ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಅದರ ಸಾಧನೆ ಅದ್ಭುತ ಎನ್ನುವುದು ಅವರಿಗೆ ಖಚಿತ ವಾಗಿದ್ದರೂ ಅದನ್ನು ಬಹಿರಂಗವಾಗಿ ಒಪ್ಪಿಕೊಳ್ಳದೆ ಆತ್ಮಘಾತುಕತನ ಪ್ರದರ್ಶಿಸುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.

ಭಾನುವಾರ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ಪಕ್ಷ ಕಾರ್ಯಕರ್ತರ ಭೇಟಿ ಮಾಡಿದ ವೇಳೆ ಮರವಂತೆಯಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಇದ್ದ 30 ಕೋಟಿ ಜನರಿಗೆ ಆಹಾರ ಒದಗಿ ಸಲು ವಿದೇಶಗಳ ಮುಂದೆ ಭಿಕ್ಷಾ ಪಾತ್ರೆ ಹಿಡಿಯಬೇಕಾಗಿದ್ದ ದೀನ ಸ್ಥಿತಿ ಯಿಂದ ದೇಶ ಇಂದು ಆಹಾರ ಸಮೃದ್ಧಿ ಯತ್ತ ಸಾಗಿಬಂದಿದೆ. ಗುಂಡುಸೂಜಿ ಯನ್ನೂ ಆಮದು ಮಾಡಿಕೊಳ್ಳ ಬೇಕಾದ ಹಂತದ ದೇಶದಲ್ಲಿಂದು ಕೈಗಾರಿಕಾ ಕ್ರಾಂತಿ ಸಂಭವಿಸಿದೆ. ವೈಜ್ಞಾನಿಕ ಕ್ಷೇತ್ರದ ಸಾಧನೆ ದೇಶವನ್ನು ಚಂದ್ರಯಾನದ ಹೊಸ್ತಿಲಿಗೆ ತಂದು ನಿಲ್ಲಿಸಿದೆ. ಶಿಕ್ಷಣ, ಆರೋಗ್ಯ, ಸಂಚಾರ, ಸಂಪರ್ಕ ಕ್ಷೇತ್ರದ ಬೆಳವಣಿಗೆ ಅಚ್ಚರಿ ಹುಟ್ಟಿಸುತ್ತಿದೆ.

ಜನರ ಸರಾಸರಿ ಆಯುರ್ಮಾನ, ಆದಾಯ ಗಣನೀಯ ವಾಗಿ ವೃದ್ಧಿಸಿದೆ. ಇನ್ನು 20 ವರ್ಷ ಗಳಲ್ಲಿ ಭಾರತ ಜಗತ್ತಿನ ಶಕ್ತ ರಾಷ್ಟ್ರಗಳ ಸಾಲಿಗೆ ಸೇರಲಿದೆ ಎಂದು ತಜ್ಞರು ಭವಿಷ್ಯ ನುಡಿಯುತ್ತಿದ್ದಾರೆ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನು ವವರಿಗೆ ಜಾಣ ಕುರುಡು ಕಾಡುತ್ತಿದೆ ಎಂದು ಅವರು ಹೇಳಿದರು.

ಇವೆಲ್ಲ ವಿಚಾರಗಳನ್ನು, ಕೇಂದ್ರ ಯುಪಿಎ ಸರ್ಕಾರದ ಮತ್ತು ಪ್ರಸಕ್ತ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಬಗೆಗೆ ಮತದಾರರಲ್ಲಿ, ಬಹುಮುಖ್ಯವಾಗಿ ಯುವಜನರಲ್ಲಿ ಅರಿವು ಮೂಡಿಸುವ ಮೂಲಕ ಕಾರ್ಯ ಕರ್ತರು ಮತ ಯಾಚಿಸಬೇಕೆಂದು ಅವರು ಸಲಹೆ ನೀಡಿದರು.

ಶಾಸಕ ಕೆ.ಗೋಪಾಲ ಪೂಜಾರಿ, ಜಿ.ಪಂ. ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ಮಾತನಾಡಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ರಮೇಶ ಗಾಣಿಗ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಎಸ್. ರಾಜು ಪೂಜಾರಿ, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ರಿಯಾಜ್ ಅಹಮದ್, ಎಸ್. ವಾಸುದೇವ ಯಡಿಯಾಳ, ಜೋಸ್, ಸತೀಶ ನಾಡ, ಗ್ರಾಮೀಣ ಸಮಿತಿ ಅಧ್ಯಕ್ಷ ಪುಟ್ಟಯ್ಯ ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎ.ಸುಗುಣಾ, ಖಂಬದಕೋಣೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.