ಜೆಸಿ ಆಸ್ಪತ್ರೆಗೆ 8 ವೆಂಟಿಲೇಟರ್ ಸೌಲಭ್ಯ

ತೀರ್ಥಹಳ್ಳಿ: ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ಅವರ ವಿಶೇಷ ಆಸಕ್ತಿಯಿಂದ ಪ್ರಧಾನ ಮಂತ್ರಿ ಕೇರ್ ನಿಧಿಯಿಂದ ಎಂಟು ವೆಂಟಿಲೇಟರ್ ಬಂದಿದ್ದು, ಆಸ್ಪತ್ರೆಗೆ ಅಳವಡಿಸಲಾಗಿದೆ.
ಶಾಸಕ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಜೆಸಿ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ವೆಂಟಿಲೇಟರ್ ಅಳವಡಿಸಿರುವ ಕುರಿತು ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಜೊತೆ ಚರ್ಚಿಸಿದರು.
ಜೆಸಿ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ಸ್ಥಾಪಿಸಲಾಗಿದ್ದು, ಅದಕ್ಕೆ ಆಕ್ಸಿಜನ್ ಸಂಪರ್ಕ ನೀಡಲಾಗಿದೆ. ಇದಕ್ಕೆ ₹ 1 ಕೋಟಿ ಹಣ ಕೇಂದ್ರದಿಂದ ಬಂದಿದೆ. ಪ್ರತಿ ವಾರ್ಡಿಗೆ ಕೊರೊನಾ ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ. ಕೆಎಫ್‌ಡಿ, ಕೊರೊನಾ ಬಂದರೂ ಜನರು ಹೆದರುವ ಅವಶ್ಯಕತೆ ಇಲ್ಲ. ಕೋವಿಡ್ ರೋಗಕ್ಕೆ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಆಸ್ಪತ್ರೆಯ ಪ್ರಯೋಗಾಲಯಕ್ಕೆ ₹ 8 ಲಕ್ಷ ಮೌಲ್ಯದ ಯಂತ್ರಗಳನ್ನು ಪಡೆಯಲಾಗಿದೆ. ಎಲ್ಲ ಪರೀಕ್ಷೆಗಳನ್ನು ಇಲ್ಲಿಯೇ ಮಾಡಲಾಗುತ್ತದೆ. ಬಡವರಿಗೆ ಇದು ತುಂಬ ಸಹಕಾರಿ. ಆಸ್ಪತ್ರೆಗೆ ಬರುವ ಬಡ ರೋಗಿಗಳು ಬಿಪಿಎಲ್ ಕಾರ್ಡ್ ಹಿಡಿದುಕೊಂಡು ಬಂದರೆ ಉಚಿತ ಚಿಕಿತ್ಸೆ ಲಭಿಸಲಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಕೊರೊನಾ ಹಾಗೂ ಮಂಗನ ಕಾಯಿಲೆಗೆ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಸಾಮಾನ್ಯ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಇದ್ದು, ಆಸ್ಪತ್ರೆ ಸುಸಜ್ಜಿತವಾಗಿದೆ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದು, ಉತ್ತಮ ಚಿಕಿತ್ಸೆ ಸಿಗುತ್ತಿದೆ ಎಂದರು.
ಜೆಸಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಗಣೇಶ್ ಭಟ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಅನಿಕೇತ್, ಜೆಸಿ ಆಸ್ಪತ್ರೆ ಆಡಳಿತಾಧಿಕಾರಿ ಡಾ. ನಿಶ್ಚಲ್, ಡಾ. ಗುರುರಾಜ್ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.