ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ರಹಿತರಿಗೆ 8150 ಮನೆಗಳ ಮಂಜೂರು

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ: ಸಚಿವ ಡಾ.ಕೆ.ಸಿ.ನಾರಾಯಣಗೌಡ
Last Updated 2 ನವೆಂಬರ್ 2022, 7:29 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿ 8150 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಸೂರು ಇಲ್ಲದ ಎಲ್ಲರಿಗೂ ನೆಲೆ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಧ್ವಜಾರೋಹಣದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಲವು ಜನಪರ ಯೋಜನೆಗಳನ್ನು ರೂಪಿಸಲಾಗಿದೆ. ಅಮೃತ ಯೋಜನೆ, ರೈತ ವಿದ್ಯಾನಿಧಿ, ಗ್ರಾಮ ಒನ್, ವಿವೇಕಾನಂದರ ಯುವಶಕ್ತಿ ಯೋಜನೆ, ಬೆಳಕು ಕಾರ್ಯಕ್ರಮಗಳ ಮೂಲಕ ಕರ್ನಾಟಕವನ್ನ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗಿದೆ ಎಂದರು.

ಶಿವಮೊಗ್ಗದಲ್ಲೂ ವಿಮಾನ ನಿಲ್ದಾಣ, ಸಿಗಂದೂರು ಸೇತುವೆ, ಹೊರ ವರ್ತುಲ ರಸ್ತೆ, ರೈಲ್ವೆ ಮೇಲು ಸೇತುವೆ, ಸ್ಮಾರ್ಟ್ ಸಿಟಿ ಯೋಜನೆಗಳ ಅನುಷ್ಠಾನಗೊಳಿಸಲಾಗಿದೆ ಎಂದರು.

ಪ್ರಸಕ್ತ ಹಂಗಾಮಿನಲ್ಲಿ 7465 ರೈತರ ಬೆಳೆ ಹಾನಿಗೆ ₹ 6.13 ಕೋಟಿ ಪರಿಹಾರ ನೀಡಲಾಗಿದೆ. ಮಳೆಯಿಂದ ಹಾನಿಗೀಡಾದ 2739 ಮನೆಗಳಿಗೆ ಪರಿಹಾರ ನೀಡಲಾಗಿದೆ. 1.55,519 ರೈತರಿಗೆ ಪಿಎಂಕೆಎಸ್ ವೈ ಯೋಜನೆಯ ಅಡಿ ₹396 ಕೋಟಿ ನೇರವಾಗಿ ಜಮಾ ಮಾಡಲಾಗಿದೆ ಎಂದರು.

ಭಾಷಣಕ್ಕೂ ಮೊದಲು ನಗರದ ಸೈನ್ಸ್ ಮೈದಾನದಿಂದ ಪೊಲೀಸ್ ಡಿಎಆರ್ ಮೈದಾನದವರೆಗೆ 10 ಇಲಾಖೆಗಳ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ, ಜಿಲ್ಲಾ
ಪಂಚಾಯಿತಿ ಸಿಇಒ ಪ್ರಕಾಶ್,ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT