ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಳಿ ಕರುಗಳಿಗೆ ಜನ್ಮ ನೀಡಿದ ಎಮ್ಮೆ

Last Updated 21 ಸೆಪ್ಟೆಂಬರ್ 2022, 6:11 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ನಾಡಕಲಸಿ ಗ್ರಾಮದಲ್ಲಿ ದುರ್ಗಪ್ಪ ಎಂಬುವವರಿಗೆ ಸೇರಿದ ಎಮ್ಮೆಯೊಂದು ಅವಳಿ ಕರುಗಳಿಗೆ ಜನ್ಮ ನೀಡಿದೆ.

ಕರುಗಳ ಪೈಕಿ ಒಂದು ಗಂಡು ಹಾಗೂ ಒಂದು ಹೆಣ್ಣು ಕರು ಇರುವುದು ಅಪರೂಪದ ವಿದ್ಯಮಾನವಾಗಿದೆ. ಸೆಪ್ಟೆಂಬರ್ 13ರಂದು ಗಂಡು ಕರು ಜನಿಸಿದ್ದು, ಸೆಪ್ಟೆಂಬರ್ 19ರಂದು ಹೆಣ್ಣು ಕರುವಿನ ಜನನವಾಗಿದೆ. ಹೀಗಾಗಿ ಈ ಅಪರೂಪದ ಕರುಗಳನ್ನು ವೀಕ್ಷಿಸಲು ಸುತ್ತಮುತ್ತಲ ಗ್ರಾಮಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಪಶು ಇಲಾಖೆಯ ಲಕ್ಷ್ಮಿ ಭಾಗವತ್ ಎಮ್ಮೆ ಹಾಗೂ ಕರುಗಳ ಆರೈಕೆಯಲ್ಲಿ ತೊಡಗಿದ್ದು, ಎಮ್ಮೆ ಮತ್ತು ಕರುಗಳು ಆರೋಗ್ಯದಿಂದ ಇವೆ. ಎಮ್ಮೆ ಒಂದು ಕರುವಿಗೆ ಜನ್ಮ ನೀಡಿ ಕೆಲವು ದಿನಗಳ ನಂತರ ಮತ್ತೊಂದು ಕರುವಿಗೆ ಜನ್ಮ ನೀಡುವುದು ಬಹಳ ಅಪರೂಪದ ಸಂಗತಿಯಾಗಿದೆ ಎಂದು ಪಶು ವೈದ್ಯಾಧಿಕಾರಿ ಡಾ.ಶ್ರೀಪಾದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT