ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್ ಸಮ್ಮಾನ್ ತಿರಸ್ಕರಿಸಿ ಪ್ರಧಾನಿಗೆ ಪತ್ರ ಬರೆದ ರೈತ

Last Updated 24 ಮಾರ್ಚ್ 2021, 2:12 IST
ಅಕ್ಷರ ಗಾತ್ರ

ಶಿಕಾರಿಪುರ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ದೊರೆಯುತ್ತಿರುವ ಧನಸಹಾಯ ತಿರಸ್ಕರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ತಾಲ್ಲೂಕಿನ ಅಂಬಾರಗೊಪ್ಪ ಗ್ರಾಮದ ರೈತ ಸಂದೇಶ್ ಬರೆದಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ವಾರ್ಷಿಕವಾಗಿ ₹ 6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ₹ 4 ಸಾವಿರ ಒಟ್ಟು ₹ 10 ಸಾವಿರ ರೈತನ ಖಾತೆಗೆ ಜಮಾವಾಗುತ್ತಿತ್ತು. ‘ಈ ಯೋಜನೆಯಡಿ ಮುಂದಿನ ದಿನಗಳಲ್ಲಿ ನನ್ನ ಅಕೌಂಟ್‌ಗೆ ಹಣ ಸಂದಾಯವಾಗುವುದು ಬೇಡ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರೈತರು ಉಪಯೋಗಿಸುತ್ತಿರುವ ಬೀಜ, ಗೊಬ್ಬರ, ಔಷಧಗಳು ಸೇರಿ ಕೃಷಿ ಪರಿಕರಗಳ ಬೆಲೆ ದುಬಾರಿಯಾಗಿದೆ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಕೃಷಿ ಸಲಕರಣೆಗಳ ಮೇಲೆ ವಿಧಿಸುತ್ತಿರುವ ತೆರಿಗೆ ಮನ್ನಾ ಮಾಡಬೇಕು. ಬೆಳೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಡಬೇಕು. ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಹೊಗಲಾಡಿಸಲು ಅಧಿಕಾರಿಗಳ ನಿಯೋಗ ರಚಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪ್ರಧಾನಿಗೆ ಬರೆದ ಪತ್ರದ ಒಂದು ಪ್ರತಿಯನ್ನು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕಿರಣ್ ಕುಮಾರ್ ಹರ್ತಿ ಅವರಿಗೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT