ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15ರಂದು ಸ್ನೇಹಮಿಲನ, ಅಭಿನಂದನಾ ಕಾರ್ಯಕ್ರಮ

ಬ್ರಾಹ್ಮಣ ಮಹಾಸಭಾ ಮುಖಂಡ ಎಸ್. ದತ್ತಾತ್ರಿ
Last Updated 13 ಫೆಬ್ರುವರಿ 2020, 8:57 IST
ಅಕ್ಷರ ಗಾತ್ರ

ಶಿವಮೊಗ್ಗ:ಕೋಟೆ ರಸ್ತೆ ಶ್ರೀಗಾಯತ್ರಿ ದೇವಸ್ಥಾನದಲ್ಲಿ ಫೆ.15ರಂದು ಸಂಜೆ 6ಕ್ಕೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸಚ್ಚಿದಾನಂದಮೂರ್ತಿ ಅವರೊಂದಿಗೆ ಸ್ನೇಹಮಿಲನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು
ಆಯೋಜಿಸಲಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಶಿವಮೊಗ್ಗ ವಲಯ ಮತ್ತು ತಾಲ್ಲೂಕು ಬ್ರಾಹ್ಮಣರ ಸಂಘದ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಉಪಮೇಯರ್ ಸುರೇಖಾ ಮುರಳೀಧರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖಂಡ ಎಸ್. ದತ್ತಾತ್ರಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಘದ ಅಧ್ಯಕ್ಷ ವೇಣುಗೋಪಾಲ್ ಕಾರ್ಯಕ್ರಮ ಉದ್ಘಾಟಿಸುವರು. ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಜಿ.ಕೆ.ಮಾಧವಮೂರ್ತಿ ಅಧ್ಯಕ್ಷತೆ ವಹಿಸುವರು. ಎಸ್.ಚಂದ್ರಶೇಖರ್, ಎಸ್. ದತ್ತಾತ್ರಿ ಹಾಗೂ ಅಬಸೆ ದಿನೇಶ್ ಕುಮಾರ್ ಎನ್. ಜೋಷಿ ಅಭಿನಂದನಾ ನುಡಿ ನಡೆಸಿಕೊಡುವರು ಎಂದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಎಂ.ಬಿ.ಭಾನುಪ್ರಕಾಶ್ ಹಾಗೂ ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ ಮತ್ತು ಕೇಂದ್ರ ಸಂಘದ ಉಪಾಧ್ಯಕ್ಷೆ ಸುಮಿತ್ರಮ್ಮ ಉಪಸ್ಥಿರಿರುವರು ಎಂದು ಹೇಳಿದರು.

ವಿಪ್ರ ಸಮಾಜದ ಅಭಿವೃದ್ಧಿ ಮಂಡಳಿಗೆ ₹ 100 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮುಂದಿನ ಕಾರ್ಯಚಟುವಟಿಕೆ ಬಗ್ಗೆ ಸಲಹೆ ಸೂಚನೆಗಳಿದ್ದಲ್ಲಿ ಶಿವಮೊಗ್ಗ ತಾಲ್ಲೂಕು ಬ್ರಾಹ್ಮಣ ಸಂಘಕ್ಕೆ ನೀಡಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ವಲಯ ಉಪಾಧ್ಯಕ್ಷ ಎಚ್.ಎನ್.ಛಾಯಾಪತಿ, ಎಚ್.ಕೆ. ಕೇಶವಮೂರ್ತಿ, ಸಂತೋಷ್, ಅಚ್ಯುತರಾವ್, ಸತ್ಯನಾರಾಯಣ್, ಎಂ. ಶಂಕರ್, ವೇಣುಗೋಪಾಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT