ಸೋಮವಾರ, ಮೇ 17, 2021
22 °C
ಕಾರಾಗೃಹದ ನೂತನ ಮುಖ್ಯ ಅಧೀಕ್ಷಕ ಮಹೇಶ್‌ ಕುಮಾರ್ ಎಸ್‌. ಜಿಗಣಿ

ಕೈದಿಗಳ ಮನಃಪರಿವರ್ತನೆಗೆ ಮತ್ತಷ್ಟು ಆದ್ಯತೆ: ಮಹೇಶ್‌ ಕುಮಾರ್ ಎಸ್‌. ಜಿಗಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೈದಿಗಳ ಮನಃಪರಿವರ್ತನೆಯ ಕಾರ್ಯಗಳಿಗೆ ಮತ್ತಷ್ಟು ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಕಾರಾಗೃಹದ ನೂತನ ಮುಖ್ಯ ಅಧೀಕ್ಷಕ ಮಹೇಶ್‌ ಕುಮಾರ್ ಎಸ್‌. ಜಿಗಣಿ ಭರವಸೆ ನೀಡಿದರು.

ಕಾರಾಗೃಹದ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ನಂತರ ಅಧಿಕಾರಿಗಳು, ಸಿಬ್ಬಂದಿ, ಕಾರಾಗೃಹ ನಿವಾಸಿಗಳಿಂದ ಶನಿವಾರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಹಿಂದೆ ಆರಂಭಿಸಲಾಗಿದ್ದ ಮನಃಪರಿವರ್ತನಾ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗ
ಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳೂ ಒಳಗೊಂಡಂತೆ ಹೆಚ್ಚಿನ ಕಾರ್ಯ ಚಟುವಟಿಕೆ ಹಮ್ಮಿಕೊಳ್ಳಲು ಅಗತ್ಯವಾದ ಕ್ರಿಯಾ ಯೋಜನೆ ರೂಪಿಸಲಾಗುವುದು. ಹಂತ ಹಂತವಾಗಿ ಜಾರಿಗೊಳಿಸಲಾಗುವುದು. ಜನ ಶಿಕ್ಷಣ ಸಂಸ್ಥೆ ವತಿಯಿಂದ ಟೈಲರಿಂಗ್, ಭದ್ರತಾ ಕಾರ್ಯು ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ತರಬೇತಿ ನೀಡಲು ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

‘ಹಿಂದೆ ಎಂಟು ಜಿಲ್ಲೆಗಳ ಜಿಲ್ಲಾ ಕಾರಾಗೃಹದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಶಿವಮೊಗ್ಗ ಕೇಂದ್ರ ಕಾರಾಗೃಹ ರಾಜ್ಯದಲ್ಲೇ ಮಾದರಿಯಾಗಿದೆ. ಕೈದಿಗಳ ಸನ್ನಡತೆಗೆ ಹೆಸರಾಗಿದೆ. ಮನಃಪರಿವರ್ತನಾ ಅಭಿಯಾನದ ಮೂಲಕ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ’ ಎಂದು ಬಣ್ಣಿಸಿದರು.

ಸಹಾಯಕ ಅಧೀಕ್ಷಕ ಶಿವಾನಂದ ಶಿವಪುರ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯ ದೂರ ಶಿಕ್ಷಣ ವಿಭಾಗದ ಪ್ರಾಧ್ಯಾಪಕಿ ಡಾ.ಎಚ್‌.ಕೆ. ಹಸೀನಾ, ಮಹಿಳಾ ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ, ಕಾರಾಗೃಹ ಅಧಿಕಾರಿ ಭಾಗೀರಥಿ, ಸಿಬ್ಬಂದಿ ಅನಿಲ್ ಕುಮಾರ್, ಮಹೇಶ್ ಕುಮಾರ್, ಸುಷ್ಮಾ, ಸವಿತಾ, ಶಿಕ್ಷಕರಾದ ಗೋಪಾಲಕೃಷ್ಣ ಮತ್ತು ಲೀಲಾ, ಮೋಹನ್ ಕುಮಾರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು