ಭಾನುವಾರ, ಆಗಸ್ಟ್ 16, 2020
21 °C

ಆತಂಕದ ನಡುವೆ ಸಕಾಲಕ್ಕೆ ಪರೀಕ್ಷಾ ಕೇಂದ್ರ ತಲುಪಿದ ಪ್ರಶ್ನೆಪತ್ರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ತಾಲ್ಲೂಕಿನ ತುಮರಿಯ ಎಸ್ಸೆಎಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆಪತ್ರಿಕೆ ಸಾಗಿಸುತ್ತಿದ್ದ ವಾಹನದ ಎದುರು ಅಂಬಾರಗೋಡ್ಲು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಮರ ಮುರಿದು ಬಿದ್ದಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ವಾಹನದಲ್ಲಿದ್ದ ಮಾರ್ಗಾಧಿಕಾರಿ, ಚಾಲಕ, ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಯ ನೆರವಿನಿಂದ ಮರವನ್ನು ತೆರವುಗೊಳಿಸಿ ಸಕಾಲದಲ್ಲಿ ಪ್ರಶ್ನೆಪತ್ರಿಕೆ ಪರೀಕ್ಷಾ ಕೇಂದ್ರವನ್ನು ತಲುಪುವಂತೆ ಮಾಡಿದ್ದಾರೆ. ಮರ ಬಿದ್ದ ಕಾರಣ ವಿದ್ಯುತ್ ತಂತಿ ತುಂಡಾಗಿದ್ದು ಮೆಸ್ಕಾಂ ಸಿಬ್ಬಂದಿ ಅದನ್ನು ಸರಿಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಸ್ಥಳಕ್ಕೆ ಭೇಟಿ ನೀಡಿದ್ದರು. ವಿದ್ಯಾರ್ಥಿಗಳ ಆತಂಕ ನಿವಾರಣೆಗೆ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು