ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಯನೂರು ಮಂಜುನಾಥ್‌ಗೆ ಬೆಂಬಲ

-
Published 25 ಮೇ 2024, 16:24 IST
Last Updated 25 ಮೇ 2024, 16:24 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯು ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ ನೀಡಲಿದೆ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಹೇಳಿದರು.

‘ಕೊರೊನಾ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರನ್ನು ಗುರುತಿಸಿ ಅವರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ನಮ್ಮ ಪರವಾಗಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದಾರೆ. 5 ತಿಂಗಳ ಗೌರವಧನ ಬಿಡುಗಡೆ ಮಾಡಿಸಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

‘ಅತಿಥಿ ಉಪನ್ಯಾಸಕರು ಕೊರೊನಾದ ಸಂದರ್ಭದಲ್ಲಿ ತುಂಬಾ ಸಂಕಷ್ಟ ಅನುಭವಿಸಿದ್ದಾರೆ. ತರಕಾರಿ ಮಾರಾಟ ಸೇರಿದಂತೆ ವಿವಿಧ ಸಣ್ಣ ಪುಟ್ಟ ಕೆಲಸ ಮಾಡಿ ಜೀವನ ಸಾಗಿಸಬೇಕಾಗಿತ್ತು. ಸಂಬಳವೂ ಸರಿಯಾಗಿ ಬರುತ್ತಿರಲಿಲ್ಲ. ಇಂತಹ ಸಂದರ್ಭದಲ್ಲಿ ಆಯನೂರು ಸುಮಾರು 2 ವರ್ಷಗಳ ಕಾಲ ನಿರಂತರವಾಗಿ ಗೌರವಧನವನ್ನು ಬಿಡುಗಡೆ ಮಾಡಿಸಿದ್ದಾರೆ. ನಮ್ಮ ಸಂಕಷ್ಟದ ಸಂದರ್ಭದಲ್ಲಿ ಜೊತೆಗಿದ್ದಾರೆ. ಅವರ ಋಣ ನಮ್ಮ ಮೇಲಿದೆ. ಹೀಗಾಗಿಯೇ ಈ ಬಾರಿ ಅವರಿಗೆ ಬೆಂಬಲಿಸುತ್ತೇವೆ’ ಎಂದರು.

ಜೆಒಸಿ ವಿಲೀನ ವಂಚಿತ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೃಷ್ಣ ಮಾತನಾಡಿ, ‘ಬಿಜೆಪಿ ಸರ್ಕಾರವಿದ್ದಾಗ ಜೆಒಸಿ ಎಂಬುದನ್ನೇ ಬಂದ್ ಮಾಡಲಾಯಿತು. ಆಗ ಅಲ್ಲಿ ಸುಮಾರು 3,746 ಸಿಬ್ಬಂದಿ ಇದ್ದರು. ಅದರಲ್ಲಿ 3,216 ಜನರನ್ನು ಕಾಯಂ ಮಾಡಲಾಯಿತು. ಕೆಲವು ಕಾರಣವೊಡ್ಡಿ 530 ಸಿಬ್ಬಂದಿಯನ್ನು ಕೈಬಿಡಲಾಯಿತು. ಇವರ ಪರವಾಗಿ ಆಯನೂರು ಮಂಜುನಾಥ್ ಬೆಳಗಾವಿ ಅಧಿವೇಶನದಲ್ಲಿ ದನಿ ಎತ್ತಿದ್ದಾರೆ. ಅವರು ನಮ್ಮ ಪರವಾಗಿ ನಿಲ್ಲುತ್ತಾರೆ ಎಂಬ ನಂಬಿಕೆಯಿಂದ ನಾವು ಕೂಡ ಅವರನ್ನು ಬೆಂಬಲಿಸುತ್ತೇವೆ’ ಎಂದು ತಿಳಿಸಿದರು.

ಕಲ್ಲೇಶಪ್ಪ, ಸುರಯ್ಯಾ, ನಗೀನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT