ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸನಗರ | ಅಬ್ಬಿ ಜಲಪಾತ ದುರಂತ: ಯುವಕನ ಮೃತದೇಹ ಪತ್ತೆ

Published 24 ಜೂನ್ 2024, 15:26 IST
Last Updated 24 ಜೂನ್ 2024, 15:26 IST
ಅಕ್ಷರ ಗಾತ್ರ

ಹೊಸನಗರ: ತಾಲ್ಲೂಕಿನ ಯಡೂರು ಬಳಿಯ ತಲಾಸಿ ಅಬ್ಬಿ ಜಲಪಾತದ ನೀರಿನಲ್ಲಿ ಕೊಚ್ಚಿಹೋಗಿದ್ದ ಬಳ್ಳಾರಿಯ ಯುವಕ ವಿನೋದ್‌ ಶವ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಭಾನುವಾರ ಈ ದುರ್ಘಟನೆ ಸಂಭವಿಸಿದ್ದು, ಮಧ್ಯಾಹ್ನದಿಂದಲೇ ಪಿಎಸ್ಐ ರಮೇಶ್‌ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ತೀವ್ರ ಶೋಧ ನಡೆಸಿದ್ದರು. ಆದರೂ ವಿನೋದ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ವಿನೋದ್ ಮೃತಪಟ್ಟಿರಬಹುದು ಎಂದು ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದರು.

ಸೋಮವಾರ ಬೆಳಿಗ್ಗೆ ಮುಳುಗು ತಜ್ಞರಾದ ಈಶ್ವರ ಮಲ್ಪೆ ಮತ್ತು ತಂಡ, ಕೋಟ ಜೀವನ್ ಮಿತ್ರ, ನಾಗರಾಜ ಪುತ್ರನ್ ಅವರನ್ನು ಕರೆಯಿಸಿ ಶೋಧ ಕಾರ್ಯ ನಡೆಸಿದಾಗ ನೀರಿನೊಳಗೆ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದ ವಿನೋದ್‌ ಮೃತದೇಹನ್ನು ಹೊರಕ್ಕೆ ತೆಗೆಯಲಾಯಿತು.

ನಗರ ಸಂಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ವಿನೋದ್‌ ಹುಟ್ಟೂರು ಬಳ್ಳಾರಿ ಜಿಲ್ಲೆಯ ಮಿಂಚೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಯಿತು. ಬೆಂಗಳೂರಿನಲ್ಲಿ ಕಂನಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ವಿನೋದ್‌ ಸೇರಿ 12 ಮಂದಿ ಯಡೂರು ಅಬ್ಬಿ ಜಲಪಾತ ವೀಕ್ಷಿಸಲು ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT