ಭಾನುವಾರ, ಜನವರಿ 17, 2021
29 °C

ತೀರ್ಥಹಳ್ಳಿಯಲ್ಲಿ ಕಾಗೆಗಳ ಅಸಹಜ ಸಾವು: ಹಕ್ಕಿಜ್ವರದ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ಪಟ್ಟಣ ಸಮೀಪದ ಮೇಲಿನಕುರುವಳ್ಳಿಯಲ್ಲಿ ಕಾಗೆಗಳು ಅಸಹಜವಾಗಿ ಮೃತಪಟ್ಟಿರುವುದು ಶುಕ್ರವಾರ ಪತ್ತೆಯಾಗಿದೆ.

ಮೇಲಿನಕುರುವಳ್ಳಿಯ ಹೆದ್ದಾರಿ ಪಕ್ಕದಲ್ಲಿ ಕಾಗೆಗಳು ಸತ್ತು ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪಶು ವೈದ್ಯಕೀಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ಬಂದ ಇಲಾಖೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸತ್ತ ಕಾಗೆಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಕ್ರಮ ತೆಗೆದುಕೊಂಡಿದ್ದಾರೆ. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಕಾರಣ ಕುರುವಳ್ಳಿಯಲ್ಲಿ ಅಸಹಜವಾಗಿ ಕಾಗೆಗೆಳು ಸತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು