ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ | ಆಟೊಗೆ ಕ್ಯಾಂಟರ್‌ ಡಿಕ್ಕಿ; ವಿದ್ಯಾರ್ಥಿನಿ ಸಾವು

Published 13 ಮೇ 2024, 15:48 IST
Last Updated 13 ಮೇ 2024, 15:48 IST
ಅಕ್ಷರ ಗಾತ್ರ

ಶಿವಮೊಗ್ಗ: ಆಟೊಗೆ ಕ್ಯಾಂಟರ್‌ ಡಿಕ್ಕಿಯಾದ ಪರಿಣಾಮ ಆಟೊದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ನಗರದ ಹೊರ ವಲಯದ ತಾವರೆ ಚಟ್ನಳ್ಳಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. 

ಗಾನವಿ (17) ಮೃತ ವಿದ್ಯಾರ್ಥಿನಿ. ವೇಗವಾಗಿ ಬಂದ ಕ್ಯಾಂಟರ್‌ ಆಟೊಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹೊರಗೆ ಬಿದ್ದ ವಿದ್ಯಾರ್ಥಿನಿಯ ಹೊಟ್ಟೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾಳೆ. 

ಘಟನೆಯಲ್ಲಿ ವಿದ್ಯಾರ್ಥಿನಿಯ ಅಜ್ಜಿ ಮತ್ತು ತಾಯಿ ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT