ಸೋಮವಾರ, ಸೆಪ್ಟೆಂಬರ್ 27, 2021
25 °C

ಆಗುಂಬೆ ಘಾಟಿಯಲ್ಲಿ ಲಾರಿ ಅಪಘಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ತಾಲ್ಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಗುರುವಾರ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಲ್ಲಿ ಸಿಕ್ಕಿಕೊಂಡಿದೆ.

ಘಾಟಿಯ 7ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಚಾಲಕ ಜಾಣ್ಮೆ ತೋರಿದ ಕಾರಣ ಜೀವ ಉಳಿದಿದೆ.

ಭತ್ತ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿತ್ತು. ಸ್ವಲ್ಪ ಮುಂದೆ ಹೋಗಿದ್ದರೂ ಲಾರಿ ಪ್ರಪಾತಕ್ಕೆ ಬೀಳುತ್ತಿತ್ತು. ತಡೆ ಗೋಡೆಯಲ್ಲಿ ಸಿಕ್ಕ ಲಾರಿಯನ್ನು ಹೊರ ತೆಗೆಯಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.