ಬುಧವಾರ, ಡಿಸೆಂಬರ್ 1, 2021
20 °C

ಅಪಘಾತ: ವಿದ್ಯಾರ್ಥಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂಸಿ: ಹಳೆಕುಂಸಿಯ ಬಳಿ ಕಾರೊಂದು ಶಾಲಾ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ.

ಸಮೀಪದ ಹಳೆಕುಂಸಿಯ ಬಳಿಯ 3ನೇ ತರಗತಿ ವಿದ್ಯಾರ್ಥಿ ವೇಣು ಗೋಪಾಲ್(9) ಮೃತಪಟ್ಟ ಬಾಲಕ.

ಸಂಜೆ ಶಾಲೆ ಮುಗಿಸಿಕೊಂಡು ಕನಕನಗರದ ಮನೆಗೆ ರಸ್ತೆಯ ಎಡಭಾಗದಿಂದ ಬರುತ್ತಿರುವಾಗ ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕನ ಕಾಲುಗಳು ಸಂಪೂರ್ಣ ಜಖಂ ಆಗಿದ್ದು, ಬಾಲಕನ ತಲೆಯ ಹಿಂಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಶಿವಮೊಗ್ಗದ
ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಬಾಲಕ ಸಾವನ್ನಪ್ಪಿದ್ದಾನೆ. ಕಾರಿನ ಚಾಲಕ ಪರಾರಿಯಾಗಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.