ಶನಿವಾರ, ಜನವರಿ 23, 2021
18 °C
ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್

ಬಿಜೆಪಿಯಲ್ಲಿ ಕಾರ್ಯಕರ್ತರಿಗೂ ಉನ್ನತ ಹುದ್ದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳೆಹೊನ್ನೂರು: ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಹುದ್ದೆಗೇರುವ ಅವಕಾಶ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ ತಿಳಿಸಿದರು.

ಅರಹತೊಳಲು ಕೈಮರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಶೇಷ ಹಾಗೂ ಜನಪರ ಕಾರ್ಯಕ್ರಮಗಳ ಫಲವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರು ಪಕ್ಷ ಬಯಸಿದಂತಹ ತೀರ್ಮಾನಗಳಿಗೆ ಅನುಗುಣವಾಗಿ ಕೆಲಸ ಮಾಡಬೇಕು. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಪಕ್ಷದ ತತ್ವ, ಸಿದ್ಧಾಂತಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 552 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 358 ಅಭ್ಯರ್ಥಿಗಳು ಬಿಜೆಪಿ ಬೆಂಬಲಿಗರು. ಪಕ್ಷವು ತಳಮಟ್ಟದಿಂದ ಗಟ್ಟಿಗೊಳ್ಳುತ್ತಿರುವುದಕ್ಕೆ ಇದು ನಿದರ್ಶನವಾಗಿದೆ. ಒಟ್ಟು 38 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದು, ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪಂಚಾಯಿತಿ ಮಟ್ಟದ ಕೆಲಸಗಳನ್ನು ಸದಸ್ಯರಾದ ನೀವೇ ಮಾಡಬಹುದು. ಹೆಚ್ಚಿನ ಅನುದಾನ ಬೇಕಾದಲ್ಲಿ ಗಮನಕ್ಕೆ ತಂದರೆ ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಮಂಡಲ ಅಧ್ಯಕ್ಷ ಮಂಜುನಾಥ, ಉಪಾಧ್ಯಕ್ಷ ಎಚ್. ವೀರೇಶಪ್ಪ, ಎಪಿಎಂಸಿ ಸದಸ್ಯ ಶ್ರೀನಿವಾಸ್, ಉಜ್ಜನಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲೇಶಪ್ಪ, ಮಹಾದೇವಪ್ಪ ಎ.ಕೆ. ರಾಜೇಶ್ (ಮಲ್ಲಿಕಾರ್ಜುನ್) ಪಟೇಲ್, ಭೂ ನ್ಯಾಯ ಮಂಡಳಿ ಸದಸ್ಯ ಎಸ್.ಆರ್. ಚಂದ್ರಕುಮಾರ್, ಬಗರ್‌ಹುಕುಂ ಸಮಿತಿ ಸದಸ್ಯ ಎ.ಆರ್. ಹಾಲೇಶಪ್ಪ, ರಾಮಚಂದ್ರರಾವ್ ಕದಂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.