ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಸಕ್ರೆಬೈಲಿಗೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸಾಕ್ಷ್ಯಚಿತ್ರದ ಚಿತ್ರೀಕರಣದ ಕಾರಣ ಬುಧವಾರ ನಟ ಪುನೀತ್ ರಾಜ್‌ಕುಮಾರ್ ಅವರು ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ಅವರು ಬಿಡಾರಕ್ಕೆ ಬಂದಿರುವ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆನೆ ಬಿಡಾರದ ಬಳಿ ಜಮಾಯಿಸಿದ್ದರು.

ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ನಡೆಯಿತು.

ಜನರ ಪ್ರವೇಶ ನಿಷಿದ್ಧ: ಚಿತ್ರೀಕರಣ ನಡೆಯುತ್ತಿದ್ದ ಕಾರಣಕ್ಕೆ ಕ್ರಾಲ್ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅರಣ್ಯಾಧಿಕಾರಿಗಳು, ಬಿಡಾರದ ಸಿಬ್ಬಂದಿ ಮತ್ತು ಚಿತ್ರೀಕರಣದ ತಂಡಕ್ಕೆ ಮಾತ್ರ ಕ್ರಾಲ್ ಒಳಗೆ ಬಿಡಲಾಯಿತು.

ಅಭಿಮಾನಿಗಳ ಭೇಟಿಯಾದ ಅಪ್ಪು: ಚಿತ್ರೀಕರಣದ ಬಿಡುವಿನ ವೇಳೆ ಪುನೀತ್ ರಾಜ್‌ಕುಮಾರ್ ಅವರು ಕ್ರಾಲ್ ಪ್ರದೇಶದಿಂದ ಹೊರಗೆ ಬಂದು ಅಭಿಮಾನಿಗಳನ್ನು ಭೇಟಿಯಾದರು. ಅಭಿಮಾನಿಗಳಿಗೆ ಕೈ ಮುಗಿದ ಅವರು ಫೋಟೊ ಕ್ಲಿಕ್ಕಿಸಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.