ಭಾನುವಾರ, ಮೇ 22, 2022
23 °C

ಶಿವಮೊಗ್ಗ: ಕೃಷಿ ವಿವಿ ಪ್ರಾಧ್ಯಾಪಕ ಶವವಾಗಿ ವಿಜಯಪುರದಲ್ಲಿ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ತಳಿ ಅಭಿವೃದ್ಧಿ ಮತ್ತು ಅನುವಂಶೀಯತೆ ವಿಭಾಗದ ಮುಖ್ಯಸ್ಥ ಪ್ರೊ.ಗಂಗಾಪ್ರಸಾದ್ (59) ಅವರ ಮೃತದೇಹ ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಕೆರೆ ಸಮೀಪ ಪತ್ತೆಯಾಗಿದೆ.

ಕೊಲೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಹ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದೊಗ್ಗನಾಳು ಗ್ರಾಮದ ಗಂಗಾಪ್ರಸಾದ್‌ ಶಿವಮೊಗ್ಗದ ಬಸವೇಶ್ವರ ನಗರದಲ್ಲಿ ನೆಲೆಸಿದ್ದರು. ಎರಡು ದಿನಗಳ ಹಿಂದೆ ಮನೆಯಿಂದ ಹೋದವರು ಮತ್ತೆ ಮರಳಿರಲಿಲ್ಲ. ಕಾರು ಸಾಸ್ವೆಹಳ್ಳಿಯಲ್ಲಿ ಪತ್ತೆಯಾಗಿದೆ. ಅವರ ಸಾವು ಅನುಮಾಸ್ಪದವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು