ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ ಸೆಪ್ಟೆಂಬರ್‌ ಮೊದಲವಾರ ಲೋಕಾರ್ಪಣೆ

Last Updated 6 ಜುಲೈ 2020, 12:13 IST
ಅಕ್ಷರ ಗಾತ್ರ

ಶಿವಮೊಗ್ಗ: ಇರುವಕ್ಕಿಯ 787 ಎಕರೆ ವಿಸ್ತಾರದಲ್ಲಿ ನಿರ್ಮಾಣವಾಗಿರುವ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ ಸಪ್ಟೆಂಬರ್ ಮೊದಲವಾರ ಲೋಕಾರ್ಪಣೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ವಿಶ್ವವಿದ್ಯಾಲಯದಲ್ಲಿ ಸೋಮವಾರ ಕಾಮಗಾರಿ ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ವಿಶ್ವವಿದ್ಯಾಲಯದಲ್ಲಿ ಮೊದಲ ಹಂತದ ಕಾಮಗಾರಿಗಳು ₹ 121 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿವೆ. ಎರಡನೇ ಹಂತದ ಕಾಮಗಾರಿಗಳು ಆರಂಭವಾಗಿವೆ. ಅದಕ್ಕಾಗಿ ಬಜೆಟ್‌ನಲ್ಲಿ ₨ 200 ಕೋಟಿ ಮೀಸಲಿಡಲಾಗಿದೆ. ಆಗಸ್ಟ್ 10ರ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೊಸ ಕ್ಯಾಂಪಸ್‌ಗೆ ಹೆಚ್ಚುವರಿ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಸೆಂಪ್ಟೆಂಬರ್‌ನಿಂದಲೇ ತರಗತಿ ಆರಂಭಿಸಲಾಗುವುದು ಎಂದರು.

ಆಡಳಿತ ಭವನ, ಅಧ್ಯಯನ ವಿಭಾಗಗಳು, ಗ್ರಂಥಾಲಯ, ಹಾಸ್ಟೆಲ್‌ಗಳು, ಕ್ಯಾಪಸ್‌ ಕ್ಯಾಂಟೀನ್‌, ಕ್ರೀಡಾಂಗಣ, ಸಭಾಂಗಣ, ಪ್ರಯೋಗಾಲಯ ಸೇರಿದಂತೆ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT