ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅ.15 ರವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿತ್ತು. ಈಗ ಮಳೆ ಪ್ರಮಾಣ ಕಡಿಮೆ ಇದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಳೆ ಹೆಚ್ಚಾದರೆ ಮತ್ತೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.