ಶನಿವಾರ, ಜುಲೈ 24, 2021
23 °C

ಆಗುಂಬೆ ಘಾಟಿ: ಭಾರಿ ವಾಹನಗಳ ಸಂಚಾರ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಜೂನ್‌ 15ರಿಂದ ಅಕ್ಟೋಬರ್ 15ರವರೆಗೆ ತೀರ್ಥಹಳ್ಳಿ, ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ. 

ವಾಹನಗಳು ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ-ಕೆರೆಕಟ್ಟೆ, ಕಾರ್ಕಳ-ಉಡುಪಿ ಮಂಗಳೂರು ಮಾರ್ಗ ಅಥವಾ ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಮಳೆಗಾಲದಲ್ಲಿ ತಿರುವಿನ ರಸ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದು ಅಪಾಯ ಎದುರಾಗಿತ್ತು. ಹಾಗಾಗಿ, ಸ್ಥಳ ಪರಿಶೀಲನೆ ನಡೆಸಿದ ರಾಷ್ಟ್ರಿಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಾರಿಗೆ ಅಧಿಕಾರಿಗಳು ನಿಷೇಧ ಅಗತ್ಯ ಎಂದು ವರದಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.