ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಜನ ಸಾಮಾನ್ಯರ ಹಾರಾಟಕ್ಕೆ ‘ಉಡಾನ್’ ರೆಕ್ಕೆ

ಸೋಗಾನೆ ವಿಮಾನ ನಿಲ್ದಾಣಕ್ಕೆ ಆನ್‌ಲೈನ್‌ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಶಂಕುಸ್ಥಾಪನೆ
Last Updated 15 ಜೂನ್ 2020, 14:02 IST
ಅಕ್ಷರ ಗಾತ್ರ

ಶಿವಮೊಗ್ಗ:ಉಡಾನ್ ಯೋಜನೆಕಾರಣ ಜನಸಾಮಾನ್ಯರೂ ಕೈಗೆಟಕುವ ದರದಲ್ಲಿ ವಿಮಾನಯಾನ ಕೈಗೊಳ್ಳುವ ಅವಕಾಶ ದೊರೆಯಲಿದೆ.ಸೋಗಾನೆಬಳಿ220 ಕೋಟಿ ರೂಪಾಯಿ ವೆಚ್ಚದಲ್ಲಿ 662.38 ಎಕರೆಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಆನ್‍ಲೈನ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಜಿಲ್ಲೆಯ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಹೊಂದಲಾಗಿದೆ.ಎರಡು ಹಂತಗಳಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.ಒಂದು ವರ್ಷದ ಒಳಗೆಪೂರ್ಣಗೊಳ್ಳುವ ನಿರೀಕ್ಷೆಇದೆ. ಗುಣಮಟ್ಟದಲ್ಲಿ ಯಾವುದೇ ರಾಜಿಇಲ್ಲ ಎಂದರು.

ಜಿಲ್ಲೆಯಲ್ಲಿಹಲವುಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನೀರಾವರಿ ಯೋಜನೆಗಳು, ಶಾಲೆಗಳಲ್ಲಿ ಮೂಲ ಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ವೇಗ ದೊರೆತಿದೆ. ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ವಿಭಾಗೀಯಕಚೇರಿ ಆರಂಭಿಸಿರುವ ಕಾರಣ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾರ್ಯಭರದಿಮದ ಸಾಗಿದೆ. ಆ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುತ್ತಿದೆ ಎಂದುಮಾಹಿತಿ ನೀಡಿದರು.

ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮ. ಶಿವಮೊಗ್ಗದಲ್ಲಿ ಮುಖ್ಯ ಎಂಜಿನಿಯರ್ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳನ್ನು ಆರಂಭಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆಯಲಿದೆ. ಗುಣಮಟ್ಟದ ಕೆಲಸ ಸಾಧ್ಯವಾಗಲಿದೆ ಎಂದರು.

ಸೋಗಾನೆ ಬಳಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿಮಾನ ನಿಲ್ದಾಣದಿಂದಾಗಿ ಜಿಲ್ಲೆ ಪ್ರಮುಖ ಕೈಗಾರಿಕಾ ವಲಯವಾಗಿ ಅಭಿವೃದ್ಧಿ ಹೊಂದಲಿದೆ. ಆಮೂಲಕ ಯುವ ಜನರಿಗೆಹೆಚ್ಚಿನ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಒಂದು ವರ್ಷ ಅವಧಿಯಲ್ಲಿ ಹಲವು ತಾಂತ್ರಿಕ ಸಮಸ್ಯೆನಿವಾರಿಸಿಕೊಂಡುವಿಮಾನನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವು ಕಾಮಗಾರಿ ತ್ವರಿತವಾಗಿಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಪ್ರಸ್ತಾವಿಕ ಮಾತನಾಡಿದಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್.ಪ್ರಥಮ ಹಂತದಲ್ಲಿ ರನ್‍ವೇ, ಟ್ಯಾಕ್ಸಿ ವೇ, ಏಪ್ರಾನ್, ಪೂರಕ ರಸ್ತೆ, ಕಂಪೌಂಡ್ ಗೋಡೆ ನಿರ್ಮಾಣವಾಗಲಿವೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟವರ್,ಅಗ್ನಿ ಶಾಮಕ ಠಾಣೆಗಳಕಟ್ಟಡನಿರ್ಮಾಣವಾಗಲಿವೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಆರ್.ಪ್ರಸನ್ನ ಕುಮಾರ್,ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಮೇಯರ್ ಸುವರ್ಣಾ ಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT