ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿ ರೂಪ ಪಡೆದ ಎಲ್ಲ ದೇಗುಲಗಳ ಜೀರ್ಣೋದ್ದಾರ: ಈಶ್ವರಪ್ಪ

Last Updated 6 ನವೆಂಬರ್ 2021, 11:08 IST
ಅಕ್ಷರ ಗಾತ್ರ

ಶಿವಮೊಗ್ಗ: ಮಂದಿರ ಕೆಡವಿ ಮಸೀದಿ ನಿರ್ಮಿಸಿರುವ ಹಿಂದುಗಳ ಎಲ್ಲ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ದೇವಾಲಯಗಳ ಜೀರ್ಣೋದ್ಧಾರಕ್ಕೆ ಕೇಂದ್ರ ಸರ್ಕಾರ ಶ್ರಮಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕಾಶಿ ವಿಶ್ವನಾಥ ಮಂದಿರದಲ್ಲಿ ಮಸೀದಿ ಇದೆ. ಮುಂದಿನ ದಿನಗಳಲ್ಲಿ ಅಲ್ಲಿ ಪೂರ್ಣ ಪ್ರಮಾಣದಲ್ಲಿ ದೇವಸ್ಥಾನ ನಿರ್ಮಿಸಲಾಗುವುದು. ಮಥುರಾದಲ್ಲಿಯೂ ಅದೇ ಸ್ಥಿತಿ ಇದೆ. ಅಲ್ಲೂ ಪೂರ್ಣಪ್ರಮಾಣದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಸೋಮನಾಥ ದೇವಾಲಯ ಸೇರಿದಂತೆ ಎಲ್ಲ ಶ್ರದ್ಧಾ ಕೇಂದ್ರಗಳನ್ನೂ ಪೂರ್ಣ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅವರಿಗೆ ಅವಕಾಶ ಸಿಕ್ಕಿದೆ. ಅಯೋಧ್ಯಯಲ್ಲಿ ಮಂದಿರ ಕಾಮಗಾರಿ ನೋಡಿ ಕಣ್ಣು ತುಂಬಿ ಬಂದಿದೆ. ಅದ್ಭುತ ಕಾರ್ಯ ನಡೆಯುತ್ತಿದೆ ಎಂದು ಶ್ಲಾಘಿಸಿದರು.

2013ರಲ್ಲಿ ಕೇದಾರೇಶ್ವರ ದೇವಸ್ಥಾನದ ಸಮೀಪ ಪ್ರವಾಹ ಬಂದಿತ್ತು. ಶಂಕರಾಚಾರ್ಯರ ಮೂರ್ತಿ ಭಗ್ನವಾಗಿತ್ತು. ಮೈಸೂರಿನ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ 12 ಅಡಿ ಎತ್ತರದ ಶಂಕರಚಾರ್ಯರ ಪ್ರತಿಮೆ ನಿರ್ಮಾಣವಾಗಿದೆ. ಶೀಘ್ರ ಕೇದಾರಕ್ಕೆ ಕಳುಹಿಸಲಾಗುವುದು ಎಂದು ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT