ತ್ಯಾಗರ್ತಿ: ‘ಆನಂದಪುರದ ಮುಖ್ಯ ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುವುದು ಹಾಗೂ ಹತ್ತಿಸುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ’ ಎಂದು ಆನಂದಪುರ ಪೊಲೀಸ್ ಠಾಣಾ ಪಿಎಸ್ಐ ಪ್ರವೀಣ್ ಹೇಳಿದ್ದಾರೆ.

ಕೆಎಸ್ಆರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಈಚೆಗೆ ಪೊಲೀಸ್ ತಿಳಿವಳಿಕೆ ಪತ್ರ ನೀಡಿ ಮಾತನಾಡಿದರು.

‘ಮುಖ್ಯ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ಗಳನ್ನು ನಿಲ್ಲಿಸುತ್ತಿರುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿದೆ. ಈ ಕುರಿತು ಸಾರ್ವಜನಿಕರಿಂದ ಅನೇಕ ದೂರುಗಳು ಬಂದಿದ್ದು, ಈ ಬಗ್ಗೆ ಈಗಾಗಲೇ ಶಿವಮೊಗ್ಗ ಹಾಗೂ ಸಾಗರ ಕೆಎಸ್ಆರ್ಟಿಸಿ ಡಿಪೊ ಅಧಿಕಾರಿಗಳಿಗೆ ಪತ್ರದ ಮೂಲಕ ಹಾಗೂ ಮೌಖಿಕವಾಗಿ ಮಾಹಿತಿ ನೀಡಲಾಗಿದೆ. ಆದರೂ ಚಾಲಕರು ರಸ್ತೆಯಲ್ಲೇ ಬಸ್ ನಿಲ್ಲಿಸುತ್ತಿದ್ದಾರೆ’ ಎಂದು ದೂರಿದ್ದಾರೆ.

‘ಮುಖ್ಯ ರಸ್ತೆಯಲ್ಲಿ ಬಸ್ ನಿಲ್ಲಿಸದೇ ಆನಂದಪುರದ ನಿಲ್ದಾಣದೊಳಗೆ ಕಡ್ಡಾಯವಾಗಿ ಬಸ್ ಕೊಂಡೊಯ್ಯಬೇಕು ಎಂದು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿ ಮುಖ್ಯ ರಸ್ತೆಯಲ್ಲಿ ಬಸ್ ನಿಲ್ಲಿಸಿದರೆ ಅಥವಾ ಇದರಿಂದ ಅಪಘಾತ ಸಂಭವಿಸಿದರೆ ಸಂಬಂಧಪಟ್ಟ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-42-1933769922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.