ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದಪುರ | ಬೈಕ್ ಅಪಘಾತ: ಮಾನವೀಯತೆ ಮೆರೆದ ಶಾಸಕ ಗೋಪಾಲಕೃಷ್ಣ ಬೇಳೂರು

Published 31 ಮೇ 2024, 14:23 IST
Last Updated 31 ಮೇ 2024, 14:23 IST
ಅಕ್ಷರ ಗಾತ್ರ

ಆನಂದಪುರ: ಸಮೀಪದ ಹೊಸಗುಂದ ತಿರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತವಾಗಿ ಅಣ್ಣ– ತಂಗಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ.

ಅವರು ಶಿವಮೊಗ್ಗದವರಾಗಿದ್ದು, ಸಿಗಂದೂರು ದೇವಸ್ಥಾನದಲ್ಲಿ ಪೂಜೆ ಮುಗಿಸಿ ಶಿವಮೊಗ್ಗದ ಕಡೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಹೊಸಗುಂದದ ತಿರುವಿನಲ್ಲಿ ಬೈಕ್‌ ಅಪಘಾತವಾಗಿದೆ.

ಸಾಗರದಿಂದ ಅದೇ ಮಾರ್ಗವಾಗಿ ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು  ಬೈಕ್ ಅಪಘಾತವಾಗಿರುವುದನ್ನು ಗಮನಿಸಿ ವಾಹನವನ್ನು ನಿಲ್ಲಿಸಿ ಅಪಘಾತದ ಬಗ್ಗೆ ಮಾಹಿತಿ ಪಡೆದು ನೆರವು ನೀಡಿದರು.

ಆಂಬುಲೆನ್ಸ್ ಬರುವುದು ತಡವಾಗುತ್ತದೆ ಎನ್ನುವ ಕಾರಣಕೆಕ, ತಮ್ಮ ವಾಹನದಲ್ಲೇ ಸಾಗರದ ಆಸ್ಪತ್ರೆಗೆ ಕಳುಹಿಸಿಕೊಟ್ಟು, ವೈದ್ಯರಿಗೆ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಜಿಲ್ಲಾ ಮಾಜಿ ಪಂಚಾಯಿತಿ ಸದಸ್ಯೆ ಅನಿತಾ ಕುಮಾರಿ, ಕಲಸೆ ಚಂದ್ರಪ್ಪ, ಸೋಮಶೇಖರ್ ಲ್ಯಾವಿಗೆರೆ, ಚೇತನ್ ರಾಜ್ ಕಣ್ಣೂರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT