ದಾನಿ ಕೆ.ಪಿ ಶಿವಪ್ರಕಾಶ್ ಕೊಡುಗೆ ನೀಡಿರುವ ಶುದ್ಧ ಕುಡಿಯುವ ನೀರಿನ ಘಟಕ.
ಗ್ರಂಥಾಲಯದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು
ಅಡುಗೆ ಸಿಬ್ಬಂದಿಗಳು
ಜಿಲ್ಲಾ ಪಂಚಾಯಿತಿ ಸಿಇಒ ಡಿಡಿಪಿಐ ಬಿಇಒ ಸಿಡಿಸಿ ಸಮಿತಿ ಸದಸ್ಯರು ಶಿಕ್ಷಕರು ಹಾಗೂ ಸಿಬ್ಬಂದಿ ಹಾಗೂ ಅಡುಗೆ ಸಿಬ್ಬಂದಿ ಸಹಕಾರದಿಂದ ಶಾಲೆ ಅತ್ಯುತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ
ಎಂ. ಮಹಾದೇವಪ್ಪ ಉಪಪ್ರಾಂಶುಪಾಲ
₹ 50 ಲಕ್ಷ ಅಂದಾಜು ವೆಚ್ಚದಲ್ಲಿ ರಂಗಮಂದಿರ ನಿರ್ಮಿಸಲು ಸಚಿವ ಎಸ್.ಮಧು ಬಂಗಾರಪ್ಪ ಅವರು ಈಗಾಗಲೇ ಯೋಜನೆ ಸಿದ್ಧ ಮಾಡಿ ಟೆಂಡರ್‌ಗೆ ಕಳುಹಿಸಿದ್ದಾರೆ. ಮಾದರಿ ಕ್ರೀಡಾಂಗಣ ನಿರ್ಮಾಣ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ
ನಾಗರಾಜ ಶುಂಠಿ ಸಿಡಿಸಿ ಸಮಿತಿಯ ಕಾರ್ಯಾಧ್ಯಕ್ಷ
‘ಎರಡು ಹಾಸ್ಟೆಲ್ ಮಂಜೂರಿಗೆ ಮನವಿ’
ಕೆಪಿಎಸ್ ಶಾಲೆ ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಪಡೆಯುತ್ತಿದೆ. ವಿದ್ಯಾರ್ಥಿಗಳ ದಾಖಲಾತಿ ಹೆಚ್ಚುತ್ತಿದೆ. ಬೇಡಿಕೆಯ ಮೇರೆಗೆ ವಿದ್ಯಾರ್ಥಿ– ವಿದ್ಯಾರ್ಥಿನಿಯರಿಗೆ ಎರಡು ಹಾಸ್ಟೆಲ್ ಮಂಜೂರು ಮಾಡುವಂತೆ ಜಿಲಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ. ಸಚಿವ ಎಸ್. ಮಧು ಬಂಗಾರಪ್ಪ ಅವರು ಎಸ್‌ಎಸ್‌ಕೆ ಅಡಿಯಲ್ಲಿ ಕೆಪಿಎಸ್‌ನ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ 12 ಕೊಠಡಿಗಳನ್ನು ಮಂಜೂರು ಮಾಡಿಸಿದ್ದಾರೆ ಆರ್. ಪುಷ್ಪಾ ಕ್ಷೇತ್ರ ಶಿಕ್ಷಣಾಧಿಕಾರಿ