ಆನವಟ್ಟಿ: ‘ಕಟ್ಟಡ ಕಾರ್ಮಿಕರ ಶ್ರಮದಿಂದಾಗಿ ಮನೆ ನಿರ್ಮಿಸಿಕೊಂಡಿರುವ ಕುಟುಂಬಗಳು ನೆಮ್ಮದಿಯಾಗಿವೆ. ಕಾರ್ಮಿಕರ ಬದುಕಿಗೆ ಸವಲತ್ತುಗಳನ್ನು ಒದಗಿಸುವ ಜವಾಬ್ದಾರಿ ಸರ್ಕಾರದ್ದು. ನಾನು ಸರ್ಕಾರದ ಭಾಗವಾಗಿ ಸವಲತ್ತುಗಳನ್ನು ಒದಗಿಸಲು ಬದ್ಧ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಆನವಟ್ಟಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಶ್ರಮಶಕ್ತಿ ಕಟ್ಟಡ ಕಾರ್ಮಿಕ ಹಾಗೂ ಅಸಂಘಟಿತ ಕಾರ್ಮಿಕರ ಸಂಘದಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಹಾಗೂ ನೂತನ ಸಂಘದ ಉದ್ಘಾಟನೆ, ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರ ಮಕ್ಕಳ ಕಲ್ಯಾಣಕ್ಕಾಗಿ 10 ಎಕರೆಯಲ್ಲಿ ಶಿವಮೊಗ್ಗ ಹಾಗೂ ಸೊರಬದಲ್ಲಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ತೆರೆಯುವ ಪ್ರಸ್ತಾವಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಜೂರಾತಿ ನೀಡಿದ್ದು, ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಯಾವುದೇ ಸಂಘಟನೆಯ ಮುಖಂಡರಾಗಲೀ ಅಥವಾ ಅಧಿಕಾರಿಗಳಾಗಲೀ ಒಗ್ಗಟ್ಟನ್ನು ಒಡೆಯುವ ಕೆಲಸ ಮಾಡಬಾರದು. ಕಾರ್ಮಿಕರು ಒಗ್ಗಟ್ಟಾಗಿದ್ದರೆ ರಾಜ್ಯ ಎತ್ತರಕ್ಕೆ ಬೆಳೆಯುತ್ತದೆ. ಕಾರ್ಮಿಕರಾಗಿ ಕೆಲಸ ಮಾಡುವವರಿಗೆ ರಾಜಕೀಯ ಬೇಡ. ಬದಲಾಗಿ ಸಹಕಾರ ಮನೋಭಾವ ಬೆಳೆಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವುದು ಅವಶ್ಯ’ ಎಂದು ತಿಳಿಸಿದರು.

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಿರಿಯ ಕಾರ್ಮಿಕರನ್ನು ಗೌರವಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ್ ಹುಣಸವಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಕೆ. ಹಾಗೂ ಸದಸ್ಯರು ಕಾರ್ಮಿಕರ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಕೆಎಸ್ಸಿಡಬ್ಲ್ಯುಸಿಯು ರಾಜ್ಯ ಘಟಕದ ಅಧ್ಯಕ್ಷ ಎನ್.ಪಿ. ಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಸುಬ್ರಮಣಿ, ಸಂಘದ ಪ್ರಧಾನ ಕಾರ್ಯದರ್ಶಿ ಜೋಗಿಶಂಕರ್, ಗೌರವ ಅಧ್ಯಕ್ಷ ಮಹದೇವಪ್ಪ ತಿಮ್ಮಾಪುರ, ಕಾರ್ಯಾಧ್ಯಕ್ಷ ಗುತ್ಯಪ್ಪ ದೊಡ್ಡಿಕೊಪ್ಪ, ಉಪಾಧ್ಯಕ್ಷ ಮಾರುತಿ ಬಂಕಸಾಣ, ಸಂಚಾಲಕ ಕುಮಾರ್ ಸಾಬರ, ಖಜಾಂಚಿ ಸುರೇಶ್ ತಿಮ್ಮಾಪುರ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ತತ್ತೂರು, ಮುಖಂಡರಾದ ಸದಾನಂದಗೌಡ ಬಿಳಗಲಿ, ಕೆ.ಪಿ. ರುದ್ರಗೌಡ, ಸುರೇಶ್ ಹಾವಣ್ಣನವರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.