ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕಾರಿಪುರ: ಅಂಜನಾಪುರ ಜಲಾಶಯ ಭರ್ತಿ; ರೈತರ ಮೊಗದಲ್ಲಿ ಸಂತಸ

Last Updated 14 ಜುಲೈ 2021, 6:54 IST
ಅಕ್ಷರ ಗಾತ್ರ

ಶಿಕಾರಿಪುರ: ತಾಲ್ಲೂಕಿನ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಅಂಜನಾಪುರ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಮೇಲೆ ಹರಿಯುತ್ತಿದೆ.

ಸುಮಾರು 2.80 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಅಂಜನಾಪುರ ಜಲಾಶಯ ತಾಲ್ಲೂಕಿನ ರೈತರ ಜೀವನಾಡಿಯಾಗಿದೆ. ಸುಮಾರು 6.5 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ಅಂಜನಾಪುರ ಜಲಾಶಯ ನೀರು ಒದಗಿಸುತ್ತದೆ. ತಾಲ್ಲೂಕಿನ ರೈತರು ಭತ್ತ ಸೇರಿ ಇತರೆ ಬೆಳೆ ಬೆಳೆಯಲು ಈ ಜಲಾಶಯದ ನೀರು ಪ್ರಮುಖ ಪಾತ್ರ ವಹಿಸುತ್ತದೆ.

ಕೋಡಿ ಮೇಲೆ ನೀರು ಹರಿಯುತ್ತಿರುವುದು ಜಲಾಶಯ ಅಚ್ಚುಕಟ್ಟು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣದ ಜನರಿಗೆ ಕುಡಿಯುವ ನೀರನ್ನು ಈ ಜಲಾಶಯದಿಂದ ಪೈಪ್‌ಲೈನ್ ಮೂಲಕ ಪೂರೈಸಲಾಗುತ್ತದೆ. ಜಲಾಶಯ ಭರ್ತಿಯಾಗಿರುವುದು ತಿಳಿಯುತ್ತಿದ್ದಂತೆ ತಾಲ್ಲೂಕಿನ ಜನ ಜಲಾಶಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಜಲಾಶಯಕ್ಕೆ ಭೇಟಿ ನೀಡುತ್ತಿದ್ದಾರೆ. ಕೆಲವರು ಜಲಾಶಯ ಮುಂಭಾಗ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT