ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಫ್‌ಡಿ ನಿರೋಧಕ ಲಸಿಕೆ ಅಭಿಯಾನ

ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿ
Last Updated 23 ಮೇ 2022, 4:08 IST
ಅಕ್ಷರ ಗಾತ್ರ

ಕಾರ್ಗಲ್: ಇಲ್ಲಿಗೆ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ರೋಗ ನಿರೋಧಕ ಲಸಿಕೆ ಅಭಿಯಾನ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಲಸಿಕೆಯನ್ನು ಪ್ರತಿ ಮನೆ ಮನೆಗೂ ತಲುಪಿಸುವ ಗುರಿಯನ್ನು ಹೊಂದಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ವಾಹನಗಳಲ್ಲಿ ಲಸಿಕೆಗಳೊಂದಿಗೆ ವನ್ಯಜೀವ ಅಭಯಾರಣ್ಯ ಪ್ರದೇಶಗಳಲ್ಲಿ ಸುತ್ತಾಡಿಕೊಂಡು ಲಸಿಕೆ ಪಡೆಯದಿರುವವರನ್ನು ಗುರುತಿಸಿ ಕಡ್ಡಾಯ ಚುಚ್ಚುಮದ್ದನ್ನು ನೀಡುವಲ್ಲಿ ನಿರತರಾಗಿದ್ದರು.

ಶೇಖಡಾ 95ರಷ್ಟು ಈ ಭಾಗದ ನಿವಾಸಿಗಳು ಪ್ರಥಮ ಮತ್ತು ದ್ವಿತೀಯ ಹಂತದ ಲಸಿಕೆಯನ್ನು ಪಡೆದಿದ್ದು, ಬೂಸ್ಟರ್ ಡೋಸ್ ಪಡೆಯಲು ಅರ್ಹತೆ ಇರುವವರಿಗೆ 3ನೇ ಹಂತದಲ್ಲಿ ಚುಚ್ಚುಮದ್ದು ನೀಡಲಾಗುತ್ತಿದೆ ಎಂದು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT