ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘ ಸಂಸ್ಥೆಗಳಿಗೆ ಧನಸಹಾಯ: ಅರ್ಜಿ ಆಹ್ವಾನ

-
Published 16 ನವೆಂಬರ್ 2023, 16:20 IST
Last Updated 16 ನವೆಂಬರ್ 2023, 16:20 IST
ಅಕ್ಷರ ಗಾತ್ರ


ಶಿವಮೊಗ್ಗ: ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೊಂದಾಯಿತ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲು ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸಂಘ ಸಂಸ್ಥೆಗಳು ಅರ್ಜಿಯನ್ನು Sevasindhu.karnataka.gov.in ಮುಖಾಂತರ ನವೆಂಬರ್‌ 14ರಿಂದ ಡಿಸೆಂಬರ್‌ 13ರವರೆಗೆ ಸಲ್ಲಿಸಬಹುದು. ಸರ್ಕಾರದ ಆದೇಶ ಸಂಖ್ಯೆ ಕಸಂವಾ 154: ಕಸಧ 2022 ದಿ: 23-06-2023 ಹಾಗೂ ತಿದ್ದುಪಡಿ ಆದೇಶ ದಿನಾಂಕ: 02-01-2023 ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri_karnataka.gov. in ನಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 08022279954/9986837037 ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT