ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಸೈನಿಕ ಮಂಡಳಿ: ಅರ್ಜಿ ಅಹ್ವಾನ

Published 26 ಜುಲೈ 2023, 16:49 IST
Last Updated 26 ಜುಲೈ 2023, 16:49 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿ ಸ್ಥಾಪಿಸಲಾಗುತ್ತಿದೆ.

ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಿದೆ. 
ಅರ್ಜಿಯನ್ನು ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಆಗಸ್ಟ್ 2 ರೊಳಗೆ ಸಲ್ಲಿಸುವುದು.
ಮಾಹಿತಿಗೆ ದೂರವಾಣಿ ಸಂಖ್ಯೆ 08182-220925 ‌‌‌‌‌ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಗಿಲ್ ವಿಜಯ ದಿವಸ ಆಚರಣೆ

ಶಿವಮೊಗ್ಗ: ಇಲ್ಲಿನ ಸೈನಿಕ ಉದ್ಯಾನವನದಲ್ಲಿ ಬುಧವಾರ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ 24 ನೆಯ ‘ಕಾರ್ಗಿಲ್ ವಿಜಯ ದಿವಸ‘ ಕಾರ್ಯಕ್ರಮ ಅತ್ಯಂತ ಶ್ರದ್ಧೆಯಿಂದ ಆಚರಿಸಲಾಯಿತು. ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಸೈನಿಕ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸಿ ನಮನ ಸಲ್ಲಿಸಿದರು. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಸಿ.ಎ.ಹಿರೇಮಠ ಅವರು ಸೈನಿಕ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ರಾಷ್ಟ್ರ ರಕ್ಷಣೆಯಲ್ಲಿ ತಮ್ಮ ತನುಮನ ಧಾರೆಯೆರೆದ ಹುತಾತ್ಮ ಸೈನಿಕರ ತ್ಯಾಗ ಬಲಿದಾನ ಸ್ಮರಿಸಿದರು. ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ವಿ.ಕೃಷ್ಣಾರೆಡ್ಡಿ ಪದಾಧಿಕಾರಿಗಳಾದ ನೇಮೋಜಿಜಿ.ಉಮೇಶ ಎಸ್. ರಘುನಾಥ ಶ್ರೀನಿವಾಸರೆಡ್ಡಿಎಚ್.ಕೆ.ಸತ್ಯನಾರಾಯಣ ಶ್ರೀನಾಥ ಶ್ರೀಕಾಂತ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT