ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಭದ್ರಾವತಿ ತಾಲ್ಲೂಕು ಅರಕೆರೆಯ ಎಚ್.ಎಲ್.ಷಡಾಕ್ಷರಿ ಆಯ್ಕೆಯಾದರು.

ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಇಬ್ಬರು ನಾಮಪತ್ರ ಸಲ್ಲಿಸಿದ್ದರು. 14 ನಿರ್ದೇಶಕರು ಮತ ಚಲಾಯಿಸಿದ್ದರು. ಎಸ್.ಪಿ.ದಿನೇಶ್ 6 ಮತಗಳನ್ನು ಪಡೆದರೆ ಷಡಾಕ್ಷರಿ 8 ಮತಗಳನ್ನು ಪಡೆದು ವಿಜಯಿಯಾದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರೂ ಆದ ಷಡಾಕ್ಷರಿ ಸತತ 12 ವರ್ಷಗಳಿಂದ ಬ್ಯಾಂಕ್ ನಿರ್ದೇಶಕರಾಗಿದ್ದಾರೆ. ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಅವರ ತಂದೆ ಎಚ್.ಲೋಕೇಶಪ್ಪ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.