ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸನಗರ: ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ, ರೈತ ಆತ್ಮಹತ್ಯೆ

Last Updated 8 ಅಕ್ಟೋಬರ್ 2022, 12:51 IST
ಅಕ್ಷರ ಗಾತ್ರ

ಹೊಸನಗರ: ಅಡಿಕೆ ತೋಟಕ್ಕೆಎಲೆಚುಕ್ಕೆ ರೋಗಬಾಧಿಸಿದ ಹಿನ್ನೆಲೆಯಲ್ಲಿ ಬೇಸತ್ತ ರೈತ ಶುಕ್ರವಾರ ತಾಲ್ಲೂಕಿನ ಕರಿಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣಪ್ಪಗೌಡ (60) ಮೃತರು. ಸಂಜೆ 4.30ರ ಹೊತ್ತಿಗೆ ಮನೆಯ ಪಕ್ಕದಲ್ಲಿರುವ ಮಾವಿನಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣಪ್ಪಗೌಡ ಮತ್ತು ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಜಮೀನಿನಲ್ಲಿ ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದರು. ಆದರೆ ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು.

ಕೃಷಿ ಅಭಿವೃದ್ಧಿಗಾಗಿ ಕೆನರಾ ಬ್ಯಾಂಕ್ ನಲ್ಲಿ ₹3 ಲಕ್ಷ , ನಗರ ನೀಲಕಂಠೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ರೂ.1.5 ಲಕ್ಷ ಸಾಲ ಮಾಡಿದ್ದರು. ಅಲ್ಲದೇ ಕೃಷಿ ಕೆಲಸಕ್ಕಾಗಿ ಊರಿನಲ್ಲಿ ಹಲವರ ಹತ್ತಿರ ಕೈಸಾಲ ಮಾಡಿಕೊಂಡಿದ್ದರು.

ಅಡಿಕೆ ತೋಟಕ್ಕೆ ರೋಗ ಬಾಧೆಯಿಂದ ತಂದೆ ಬೇಸರಗೊಂಡಿದ್ದರು. ಅದೇ ಕಾರಣಕ್ಕೆ ಆತ್ಮಹತ್ಯೆ ಮಡಿಕೊಂಡಿದ್ದಾರೆ ಎಂದು ಕೃಷ್ಣಪ್ಪಗೌಡ ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT