ಮಂಗಳವಾರ, ಆಗಸ್ಟ್ 16, 2022
30 °C
ಅಧಿಕಾರಿಗಳ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ

ಪ್ರವಾಸಿಗರು ಇಡೀ ದಿನ ಜೋಗದಲ್ಲೇ ಕಳೆಯಲು ವ್ಯವಸ್ಥೆ: ಬಿ.ವೈ.ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಗಲ್‌: ಜೋಗ ಜಲಪಾತದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹ 120 ಕೋಟಿ ನೀಡಿದೆ. ಪ್ರವಾಸಿಗರು ಜೋಗದ ತಾಣಗಳಲ್ಲಿ ಇಡೀ ದಿನ ಕಳೆಯಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಜೋಗದಲ್ಲಿ ಬುಧವಾರ ಜೋಗ ಅಭಿವೃದ್ಧಿ ನೀಲನಕ್ಷೆ ಕುರಿತು ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಈಗಿರುವ ಸೌಲಭ್ಯ ಉತ್ತಮಪಡಿಸುವ ಜತೆಗೆ ಇನ್ನಷ್ಟು ಹೊಸ ಸೌಲಭ್ಯಗಳನ್ನು ಒದಗಿಸಬೇಕಿದೆ. ಪ್ರವಾಸೋದ್ಯಮ ಇಲಾಖೆ ಜತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವೂ ಕೈಜೋಡಿಸಬೇಕು. ತಜ್ಞರ ಸಲಹೆ ಪಡೆದು ನೀಲನಕ್ಷೆ ಅಂತಿಮಗೊಳಿಸಿ, ಟೆಂಡರ್ ಕರೆಯುವ ಪ್ರಕ್ರಿಯೆ ಆರಂಭಿಸಬೇಕು  ಎಂದು ಸೂಚಿಸಿದರು.

ಇಲ್ಲಿನ 22 ಎಕರೆ ಪ್ರದೇಶದಲ್ಲಿ ವೀಕ್ಷಣಾ ಗೋಪುರ, ಕಾರಂಜಿಗಳ ನಿರ್ಮಾಣ, ವಿಶ್ರಾಂತಿ ಗೃಹಗಳು, ಉದ್ಯಾನ, ವಿದ್ಯುದಾಗಾರ ವೀಕ್ಷಣೆಗೆ ಅವಕಾಶ, ಶನಿವಾರ ಮತ್ತು ಭಾನುವಾರ ಜಲಪಾತಕ್ಕೆ ನೀರು ಹರಿಸುವ ಪ್ರಸ್ತಾವಗಳಿಗೆ ಅಂತಿಮ ರೂಪ ನೀಡಬೇಕು ಎಂದು ತಾಕೀತು ಮಾಡಿದರು.

ಕೆಪಿಟಿಸಿಲ್ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್, ‘ಜೋಗದಲ್ಲಿ ಕೆಪಿಟಿಸಿಎಲ್‍ಗೆ ಸೇರಿದ ಹಲವು ಆಸ್ತಿಗಳಿವೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಪವರ್ ಸ್ಟೇಷನ್, ಆಸ್ಪತ್ರೆ ಇತ್ಯಾದಿ ಕಟ್ಟಡ ಬಳಸಿಕೊಳ್ಳಬಹುದು’ ಎಂದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಮೇಶ್, ವಿಜಯ್ ಶರ್ಮ, ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಾದ ರಾಜಪ್ಪ, ರವಿ, ಲಕ್ಷ್ಮೀನಾರಾಯಣ ಕಾಶಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು